ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂದವರು ಸಾಮೂಹಿಕವಾಗಿ ಪ್ರಾರ್ಥಿಸಿದರು.
ಶಿಡ್ಲಘಟ್ಟ : ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿರುವ ದರ್ಗಾ ಮಸೀದಿಯಿಂದ ಕೋಟೆ ವೃತ್ತದಿಂದ ಈದ್ಗಾ ಮೈದಾನದವರೆಗೂ ಮೆರವಣಿಗೆಯಲ್ಲಿ ಮುಸ್ಲಿಂ ಬಾಂದವರೆಲ್ಲರೂ ಭಾಗಿಯಾಗಿ ಇಂದು ಪವಿತ್ರವಾದ ರಂಜಾನ್ ಹಬ್ಬವನ್ನು ಬೆಳಗ್ಗೆಯಿಂದಲೇ ಹೊಸ ಉಡುಗೆ ತೊಡುಗೆಗಳನ್ನು ತೊಟ್ಟು ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಒಬ್ಬರಿಗೊಬ್ಬರು ಅಪ್ಪಿಕೊಂಡು ಶುಭಾಶಯ ಕೋರಿದರು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿಎನ್ ರವಿಕುಮಾರ್ ರವರ ಸಹೋದರ ಬಿ.ಎನ್ ಸಚಿನ್ ಸಹ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಪ್ರತಿಯೊಬ್ಬರನ್ನು ಅಪ್ಪಿಕೊಂಡು ಅವರಿಗೆ ಮತ್ತೊಮ್ಮೆ ಶುಭಾಶಯ ಕೋರಿದರು.
ಪವಿತ್ರ ರಂಜಾನ್ ನಲ್ಲಿ ಒಂದು ತಿಂಗಳ ಉಪವಾಸ ಮಾಡುವ ಮೂಲಕ ನಮ್ಮ ಸಂಬಂಧ ದೇವರ ಜೊತೆ ಮತ್ತಷ್ಟು ಗಟ್ಟಿಯಾಗುತ್ತೆ. ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂದು ಮುಸ್ಲಿಂ ಬಾಂದವರು ನಂಬುತ್ತಾರೆ. ಈ ತಿಂಗಳಲ್ಲಿ ಉಪವಾಸ ಮಾಡಿದ್ರೆ ಕಷ್ಟಗಳು ಕಡಿಮೆಯಾಗುತ್ತವೆ ಎಂದು ಕೆಲವರು ನಂಬುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಬಡವರಿಗೆ ದಾನ-ಧರ್ಮ ಮಾಡುವುದು ಹಾಗೂ ಹಸಿದವರಿಗೆ ಆಹಾರ ನೀಡುವಂಥ ಪುಣ್ಯ ಕಾರ್ಯಗಳನ್ನು ಮಾಡುತ್ತಾರೆ.
ಈದ್-ಉಲ್-ಫಿತರ್ ಎಂಬುದು ಇಸ್ಲಾಮಿಕ್ ಪ್ರವಾದಿ ಮಹಮ್ಮದ್ ಅವರಿಂದ ಹುಟ್ಟಿಕೊಂಡಿತು ಎನ್ನಲಾಗಿದೆ. ಕೆಲವು ಸಂಪ್ರದಾಯಗಳ ಪ್ರಕಾರ, ಮೆಕ್ಕಾದಿಂದ ಮಹಮ್ಮದ್ ವಲಸೆ ಬಂದ ನಂತರ ಈ ಹಬ್ಬಗಳನ್ನು ಮದೀನಾದಲ್ಲಿ ಪ್ರಾರಂಭಿಸಲಾಯಿತು. ಇಸ್ಲಾಮಿಕ್ ಪ್ರವಾದಿಯ ಪ್ರಸಿದ್ಧ ಒಡನಾಡಿಯಾದ ಅನಸ್, ಮುಹಮ್ಮದ್ ಮದೀನಾಕ್ಕೆ ಆಗಮಿಸಿದಾಗ, ಜನರು ಎರಡು ನಿರ್ದಿಷ್ಟ ದಿನಗಳನ್ನು ಆಚರಿಸುವುದನ್ನು ಕಂಡುಕೊಂಡರು. ಈದ್-ಉಲ್-ಫಿತರ್ ಮತ್ತು ಈದ್-ಅಲ್-ಅಧಾ. ಇನ್ನು ಈ ಹಬ್ಬಕ್ಕೆ ಅದರದೇ ಆದ ಮಹತ್ವ ಇದೆ. ಈ ತಿಂಗಳಲ್ಲಿ ಆಚರಿಸುವ ಆಚರಣೆಗಳು ಮಹತ್ವದ ವೈಜ್ಞಾನಿಕ ಕಾರಣಗಳನ್ನು ಒಳಗೊಂಡಿವೆ.
ಇನ್ನು ನಗರದಲ್ಲಿ ಯಾವುದೇ ರೀತಿಯ ಅಹಿತರ ಘಟನೆಗಳು ನಡೆಯದಂತೆ ಸರ್ಕಲ್ ಇನ್ಸ್ ಪೆಕ್ಟರ್ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನ್ನು ನೀಡಲಾಗಿತ್ತು.
ಈ ಸಂದರ್ಭದಲ್ಲಿ ಜಾಮೀಯಾ ಮಸೀದಿ ಕಾರ್ಯದರ್ಶಿ ಬಿ ಸಯ್ಯದ್ ಸಲಾಂ ಸಾಬ್,ಅಧ್ಯಕ್ಷ ಎಚ್ ಎಸ್ ರಫೀಕ್ ಅಹ್ಮದ್,ಮಹ್ಮದೀಯಾ ಮಸೀದಿ ಕಾರ್ಯದರ್ಶಿ ಶರೀಪ್,ಮದೀನಾ ಮಸೀದಿ ನಿಸಾರ್ ಅಹ್ಮದ್, ಅಕ್ರಂ ಪಾಷಾ, ಖದೀರ್ ಪಾಷಾ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂದವರು ಭಾಗವಹಿಸಿದ್ದರು.