ಶಿಡ್ಲಘಟ್ಟ : ರಾಷ್ಟ್ರೀಯ ನಾಡ ಹಬ್ಬಗಳ ಅಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ.ಆರ್. ಅಂಬೇಡ್ಕರ್ ರವರ 133 ನೇ ಜಯಂತೋತ್ಸವವನ್ನ ಕಛೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿಯನ್ನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎನ್ ಸ್ವಾಮಿ, ತಾ.ಪಂ. ಇ.ಓ. ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ. ಕೆ.ಎನ್ ಸುಬ್ಬಾರೆಡ್ಡಿ, ನಾರಾಯಣಸ್ಚಾಮಿ, ಸೇರಿದಂತೆ ಇತರರು ಹಾಜರಿದ್ದರು