ಜಾಮೀನು ಮಂಜೂರು ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ಸರ್ಕಾರದ ಸಿದ್ದತೆ.
ಬೆಂಗಳೂರು: ಹಾಸನ ಜಿಲ್ಲೆಯ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್ .ಡಿ.ರೇವಣ್ಣ ಅವರಿಗೆ 42 ಎಸಿಎಂಎಂ ನ್ಯಾಯಾಲಯ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇದರ ಬೆನ್ನಲ್ಲೇ, ಜಾಮೀನು ರದ್ದುಕೋರಿ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ. ಇದರಿಂದಾಗಿ ರೇವಣ್ಣ ಮತ್ತೊಂದು ಸುತ್ತಿನ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ.
ಈ ಹಿಂದೆ ಆಪಹರಣ ಪ್ರಕರಣದಲ್ಲಿ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿರುವಾಗಲೇ ಜಾಮೀನು ಪಡೆದಿದ್ದರು. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಾದ-ಪ್ರತಿವಾದ ಆಲಿಸಿದ ಬಳಿಕ ಕಾಯ್ದಿರಿಸಲಾಗಿತ್ತು. ತೀರ್ಪನ್ನು
ಈಗ42ನೇ ಎಸಿಎಂಎಂ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಐದು ಲಕ್ಷ ಬಾಂಡ್ ಹಾಗೂ ಒಬ್ಬರ ಶೂರಿಟಿ ಒದಗಿಸುವಂತೆ ನ್ಯಾಯಾಲಯವು ಆದೇಶಿಸಿ ರೇವಣ್ಣಗೆ ಜಾಮೀನು ನೀಡಿದೆ. ಇದರಿಂದಾಗಿ ರೇವಣ್ಣನಿರಾಳರಾಗಿದ್ದಾರೆ.
ಸರ್ಕಾರದ ಪರ ಎಸ್ ಪಿಪಿ, ಹೊಳೆನರಸೀಪುರ ಪ್ರಕರಣದಲ್ಲಿ ಈ ಹಿಂದೆ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಅತ್ಯಾಚಾರ ಸೆಕ್ಷನ್ 376ನ್ನು ಸೇರ್ಪಡೆ ಮಾಡಲಾಗಿದೆ. ಸಂತ್ರಸ್ತೆಗೆ ಜೀವ ಭಯ ಇದೆ ಎಂಬುದಾಗಿ ಹೇಳಲಾಗಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬಾರದು ಎಂದು ವಾದಿಸಿದ್ದರು.
ಈ ವೇಳೆ ಸುಪ್ರೀಂಕೋರ್ಟ್ ಹಲವು ತೀರ್ಪುಗಳಲ್ಲಿ ತಿಳಿಸಿದೆ. ಅಲ್ಲದೇ ಅತ್ಯಾಚಾರ ಆರೋಪ ಸಂಬಂಧದ ತನಿಖೆ ಮುಂದುವರೆದಿರುವ ಸಮಯದಲ್ಲಿ ಜಾಮೀನು ಮಂಜೂರು ಮಾಡಬಾರದು ಎಂದು ನ್ಯಾಯಾಲಯಕ್ಕೆ ವಿವರಿಸಿದ್ದರು. ಎಸ್‌ಪಿಪಿ ನ್ಯಾಯಾಲಕ್ಕೆ ವಿವರಿಸಿದ್ದರು.
ರೇವಣ್ಣ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ಪ್ರಕರಣದಲ್ಲಿ ದೂರನ್ನು ಹೇಗೆ ದಾಖಲಿಸಲಾಗಿದೆ ಎಂಬುದರ ವಿವರಣೆ ಇದೆ. ಇದೊಂದು ರೀತಿಯಲ್ಲಿ ಅರೇಬಿಯನ್ ನೈಟ್ ಕಥೆಯ ರೀತಿಯಲ್ಲಿದೆ. ಸಂತ್ರಸ್ತೆ ದೂರನ್ನು ಟೈಪ್ ಮಾಡಿ ದಾಖಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಸಿಆರ್‌ಪಿಸಿ 154ರ ಅಡಿ ಅತ್ಯಾಚಾರ ಆರೋಪ ಪ್ರಕರಣಗಳನ್ನು ಮಹಿಳಾ ಅಧಿಕಾರಿ ದೂರು ದಾಖಲಿಸಿಕೊಳ್ಳಬೇಕು. ಸಂತ್ರಸ್ತೆ ಹೇಳಿಕೆ ವಿಡಿಯೋ ಮಾಡಬೇಕಿತ್ತು. ಮಹಿಳೆಯ ಘನತೆ ಕಾಪಾಡುವ ನಿಟ್ಟಿನಲ್ಲಿ ಕಾಯಿದೆಗೆ 2013ರಲ್ಲಿ ತಿದ್ದುಪಡಿ ತರಲಾಗಿದೆ. ಆದರೆ, ಇದನ್ನು ಪಾಲಿಸಲಾಗಿಲ್ಲ. ಪುರುಷ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ಅನ್ನು ಕಾನೂನು ಬಾಹಿರವಾಗಿ ದಾಖಲಿಸಲಾಗಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ಎರಡೂ ಕಡೆ ವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದರು. ಈಗ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ದೊರೆತಿದೆ.