Tuesday, December 24, 2024
Homeಜಿಲ್ಲೆಪೋಷಕರು ಮಕ್ಕಳಿಗೆ ಮೊಬೈಲ್ ಕೊಡಬೇಡಿ ಎಚ್ಚರ ವಹಿಸಿ ; ಸರ್ಕಲ್ ಇನ್ಸ್ ಪೆಕ್ಟರ್ ಎಂ....

ಪೋಷಕರು ಮಕ್ಕಳಿಗೆ ಮೊಬೈಲ್ ಕೊಡಬೇಡಿ ಎಚ್ಚರ ವಹಿಸಿ ; ಸರ್ಕಲ್ ಇನ್ಸ್ ಪೆಕ್ಟರ್ ಎಂ. ಶ್ರೀನಿವಾಸ್

ಪೊಲೀಸ್ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಅರಿವು ಕಾರ್ಯಕ್ರಮ.

ಶಿಡ್ಲಘಟ್ಟ: ತಂತ್ರಜ್ಞಾನ ಮುಂದುವರೆಯುತ್ತಿದೆ ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿಯೊಬ್ಬರ ಕೈಯಲ್ಲೂ ಮೊಬೈಲ್ ಸಾಮಾನ್ಯವಾಗಿದೆ. ಪೋಷಕರು ತಮ್ಮ ಮಕ್ಕಳ ಕೈಗೆ ಮೊಬೈಲ್ ಕೊಡಬಾರದು. ಮಕ್ಕಳು ಮೊಬೈಲ್ ಬಳಕೆಯಿಂದ ಭವಿಷ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತವೆ. ಮಕ್ಕಳ ಬಗ್ಗೆ ಪೋಷಕರು ಎಚ್ಚರವಹಿಸಬೇಕು. ಅಪಘಾತಗಳು ತಡೆಗಟ್ಟುವಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದೆ ಸಂಚಾರಿ ನಿಯಮಗಳು ಪಾಲಿಸಬೇಕು ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಕಾನೂನು ಹಕ್ಕುಗಳು ತಿಳಿಯಬೇಕು ಸರ್ಕಲ್ ಇನ್ಸ್ ಪೆಕ್ಟರ್ ಎಂ. ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹಾಗೂ ಪೊಲೀಸ್ ಇಲಾಖೆ, ನಗರ ಪೊಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಅರಿವು ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕೆಲಸಗಳು ಶ್ಲಾಘನೀಯವಾದದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶಿಡ್ಲಘಟ್ಟದ ಯೋಜನಾಧಿಕಾರಿ ಸುರೇಶ್ ಗೌಡ ಅವರು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀಕರಣ ಮತ್ತು ಕಾನೂನುಗಳ ಅರಿವು ಹಾಗೂ ರಕ್ಷಣೆಗಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ನಿರಂತರ ಕರ್ತವ್ಯ ನಿರ್ವಹಿಸುತ್ತಿದೆ. ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ.ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಎಂಬ ಪ್ರತ್ಯೇಕ ವಿಭಾಗವನ್ನು ರಚಿಸುವ ಮೂಲಕ ಪ್ರತೀ ತಾಲ್ಲೂಕಿನ 125 ಸ್ವ ಸಹಾಯ ಸಂಘಗಳ ಒಟ್ಟು 1250/- ಮಂದಿ ಮಹಿಳಾ ಸದಸ್ಯರಿಗೆ ಪ್ರತೀ ತಿಂಗಳು ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಅರಿವು, ಶಿಕ್ಷಣದ ಮಹತ್ವ ಮತ್ತು ಪೋಷಕರ ಪಾತ್ರ ಮುಂತಾದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆ ಸಬ್ ಇನ್ಸೆಕ್ಟರ್ ವೇಣುಗೋಪಾಲ್, ಸಹಾಯಕ ಸಬ್ ಇನ್ಸೆಕ್ಟರ್ ವೆಂಕಟರವಣಪ್ಪ ಪೋಲಿಸ್ ಇಲಾಖೆಯ ಸಿಬ್ಬಂದಿ ಹಾಗೂ ಧರ್ಮಸ್ಥಳ ಯೋಜನೆಯ ಸಿಬ್ಬಂದಿ ಮತ್ತು ಪ್ರಗತಿ ಬಂಧು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ವರದಿ: ಕೋಟಹಳ್ಳಿ ಅನಿಲ್ ಕುಮಾರ್ ಕೆ.ಎ

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!