Tuesday, December 24, 2024
Homeರಾಜ್ಯಶಕ್ತಿ, ಗೃಹಲಕ್ಷ್ಮಿ ಯೋಜನೆಗೆ ಹರ್ಷ. ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ, ಡಿಸಿಎಂಗೆ ನಾರಿಯರ ಅಭಿನಂದನೆ

ಶಕ್ತಿ, ಗೃಹಲಕ್ಷ್ಮಿ ಯೋಜನೆಗೆ ಹರ್ಷ. ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ, ಡಿಸಿಎಂಗೆ ನಾರಿಯರ ಅಭಿನಂದನೆ

ಬೆಂಗಳೂರು: ‘ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿ ಕೊಂಡರು’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ – ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ‘ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ, ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾದಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿ ಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ’ ಎಂದರು.

ಗೃಹ ಲಕ್ಷ್ಮಿ, ಶಕ್ತಿಯೋಜನೆ ಜಾರಿಗೆ ಸಿಎಂಗೆ ನಾರಿಯರ ಅಭಿನಂದನೆ

ಸರ್ಕಾರಿ ಬಸ್‌ ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಹಾಗೂ ಗೃಹಲಕ್ಷ್ಮಿ ಕಲ್ಪಿಸಿರುವುದಕ್ಕೆ ನಾರಿಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶನಿವಾರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆದ ವೇಳೆ ಮಹಿಳೆಯರು ಅಭಿನಂದನೆ ಸಲ್ಲಿಸಿದ ಮಾಹಿತಿಯನ್ನು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ. ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು. ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ತಮ್ಮದಾಗಿದೆ ಎಂದು ಅವರು ಹೇಳಿದ್ದಾರೆ.

ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ವೆಂಕಟೇಶ್, ಭೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರು ಶನಿವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಿದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!