ಮುಂಬೈ: ಟಿ20 ವಿಶ್ವಕಪ್‌ಗೆ ಭಾರತ ತಂಡದ ಮೊದಲ ಕಂತು ಇಂದು ಅಮೆರಿಕಗೆ ತೆರಳಲಿದೆ. ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಸೇರಿದಂತೆ ಕೆಲ ಆಟಗಾರರು ಅಮೆಇರಿಕೆಗೆ ಪ್ರಯಾಣ ಬೆಳೆಸಿದ್ದು, ಉಳಿದವರು ಇನ್ನೆರಡು ದಿನಗಳಲ್ಲಿ ವಿಮಾಣ ಹತ್ತಲಿದ್ದಾರೆ. ಟೀಮ್ ಇಂಡಿಯಾದ ಮೊದಲ ಬ್ಯಾಚ್ ಶನಿವಾರ ರಾತ್ರಿ ನ್ಯೂಯಾರ್ಕ್‌ಗೆ ತೆರಳಿದ್ದು, ಈ ಬಳಗದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಟೀತ್ ಬುಮ್ರಾ, ಶಿವಂ ದುಬೆ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ರಿಷಬ್ ಪಂತ್, ಕುದೀಪ್ ಯಾದವ್, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಇದ್ದಾರೆ.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಸಂಜು ಸ್ಯಾಟ್ಸನ್, ಯಶಸ್ವಿ ಜೈಸ್ವಾಲ್, ಯುಜೇಂದ್ರ ಚಹಲ್, ಅವೇಶ್ ಖಾನ್ (ಮೀಸಲು ಆಟಗಾರ) ಇನ್ನೆರಡು ದಿನಗಳಲ್ಲಿ ಅಮೆರಿಕದತ್ತ ಪ್ರಯಾಣ ಬೆಳೆಸಲಿದ್ದಾರೆ.
ಈ ಆಟಗಾರರು ಮೇ 24 ರಂದು 2ನೇ ಕ್ವಾಲಿಫೈಯರ್ ಪಂದ್ಯವಾಡಿರುವ ಕಾರಣ ಇಂದು ಪ್ರಯಾಣಿಸುವ ಸಾಧ್ಯತೆಯಿಲ್ಲ. ಹೀಗಾಗಿ ಇನ್ನೆರಡು ದಿನಗಳಲ್ಲಿ ಅಮೆರಿಕ ವಿಮಾನ ಏರಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಹಾಗೆಯೇ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಲಂಡನ್ನಲ್ಲಿದ್ದಾರೆ. ಅವರು ಅಲ್ಲಿಂದಲೇ ನ್ಯೂಯಾರ್ಕಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.
ಈ ಬಾರಿಯ ಟಿ20 ವಿಶ್ವಕಪ್ ಗೆ ಆಯ್ಕೆಯಾಗಿರುವ ಭಾರತದ ಯಾವುದೇ ಆಟಗಾರ ಐಪಿಎಲ್ ಫೈನಲ್ ಆಡುತ್ತಿಲ್ಲ ಎಂಬುದು ವಿಶೇಷ.
ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸಪ್ರೈಸರ್ಸ್ : ಹೈದರಾಬಾದ್ ತಂಡದ ಯಾವುದೇ ಆಟಗಾರ ಟೀಮ್ ಇಂಡಿಯಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿಲ್ಲ.ಆದಾಗ್ಯೂ ಕೆಕೆಆರ್ ತಂಡದ ಆಟಗಾರ ರಿಂಕು ಸಿಂಗ್ ಮಾತ್ರ ಮೀಸಲು ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಐಪಿಎಲ್‌ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ದವಾಗಿದೆ. ಭಾನುವಾರ (ಮೇ 26) ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಕೆಕೆಆರ್ ಹಾಗೂ ಎಸ್‌ಆರ್ಹೆಚ್ ತಂಡಗಳು ಮುಖಾಮುಖಿಯಾಗಲಿದೆ.
ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದರೆ, ಎಸ್‌ಎಚ್ ತಂಡ ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ),ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಟ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುದ್ದೀಪ್ ಯಾದವ್, ಯುಜೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಟೀತ್ ಬುಮ್ರಾ.