ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಐದು ವರ್ಷಗಳ ಅವಧಿಯಲ್ಲಿ ಏಕರೂಪ ನಾಗರಿಕ ಸಂಹಿತೆ, ಒಂದು ದೇಶ ಒಂದು ಚುನಾವಣೆ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಒಂದು ದೇಶ ಒಂದು ಚುನಾವಣೆ ನಡೆದರೆ ವೆಚ್ಚವೂ ತಗ್ಗಲಿದೆ, ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಅವರು ಹೇಳಿದರು. ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ದೇಶದಲ್ಲೆಡೆ ಏಕಕಾಲಕ್ಕೆ ಚುನಾವಣೆ ನಡೆಸುವ ಸಮಯ ಬಂದಿದ್ದು, ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲಿದೆ ಎಂದು ಹೇಳಿದರು. ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಜವಾಬ್ದಾರಿ ಮೋದಿ ಸರ್ಕಾರದ ಮೇಲಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಸಂವಿಧಾನ ರಚನೆಯಾದಾ ಗಿನಿಂದಲು ಇದು ಬಾಕಿ ಉಳಿದಿದೆ ಎಂದರು. ಕಳೆದ ಮೂರೂವರೆ ದಶಕಗಳ ನಂತರ ಜಮ್ಮು ಮತ್ತು ಕಾಶ್ಮೀರ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಲಡಾಕ್‌ನಲ್ಲಿ ಕೇಂದ್ರ ಸರ್ಕಾರದ ನಿರೀಕ್ಷೆಗೂ ಮೀರಿ ಮತದಾರರು
ಸಕ್ರಿಯವಾಗಿ ಪಾಲ್ಗೊಂಡು ತಮ ಹಕ್ಕು ಚಲಾಯಿಸಿದ್ದಾರೆ. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಜಮ್ಮ ಕಾಶ್ಮೀರಕ್ಕೆ ಚುನಾವಣೆ ನಡೆಸುವ ಇಂಗಿತ ವ್ಯಕ್ತಪಡಿಸಿದರು.
ಜಮ್ಮು ಮತ್ತು ಕಾಶೀರದಲ್ಲಿ ಯಶಸ್ವಿ ಮತದಾನದಿಂದ ನಡೆದ ಪ್ರತ್ಯೇಕತಾವಾದಿಗಳು ಕೂಡ ಅಗಾಧ ಮತ ಚಲಾಯಿಸುವ ಮೂಲಕ ಮೋದಿ ಸರ್ಕಾರದ ಕಾಶ್ಮೀರ ನೀತಿಯನ್ನು ಸಮರ್ಥಿಸಿಕೊಂಡಿವೆ. ವಿಧಾನಸಭಾ ಚುನಾವಣೆ ನಡೆಸುವ ಸಂಬಂಧ ಸೆಪ್ಟೆಂಬರ್ 30 ರ ಮೊದಲ ಸಭೆ ನಡೆಯಲಿದೆ ಎಂದು ಅಮಿತ್ ಶಾ ಸುಳಿವು ನೀಡಿದರು.
ಚುನಾವಣೆ ನಡೆಸುವ ಸಂಬಂಧ ಸರ್ವೋಚ್ಚ ನ್ಯಾಯಾಲಯ ಗಡುವಿನೊಳಗೆ ನೀಡಿರುವ ಚುನಾವಣೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅಮಿತ್ ಶಾ ಉತ್ತರಿಸಿದರು. ಲೋಕಸಭಾ ಚುನಾವಣೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಣಿವೆಯಲ್ಲಿ ಪಕ್ಷ ಇನ್ನೂ ತನ್ನ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ಖಂಡಿತವಾಗಿಯೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.