Monday, December 23, 2024
Homeರಾಜಕೀಯಮತಗಟ್ಟೆ ಸಮೀಕ್ಷೆಗಳು ಸುಳ್ಳಾಗಲಿವೆ ಕಾಂಗ್ರೇಸ್ ಎರಡಂಕ್ಕಿ ದಾಟಲಿದೆ: ಡಿಕೆಶಿ

ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗಲಿವೆ ಕಾಂಗ್ರೇಸ್ ಎರಡಂಕ್ಕಿ ದಾಟಲಿದೆ: ಡಿಕೆಶಿ

 


ಬೆಂಗಳೂರು: ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು ಎಂದು ಸಮರ್ಥಿಸಿಕೊಂಡರು.

ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ದಾಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 80 ರಿಂದ 85 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ಜೊತೆಗೆ ನಾನು ನಡೆಸಿದ್ದ ಖಾಸಗಿ ಸಮೀಕ್ಷೆ ಪ್ರಕಾರದಂತೆ ಜನ ನಮಗೆ 136 ಸ್ಥಾನ ನೀಡಿದರು ಎಂದು ತಿಳಿಸಿದರು.

ರಾಜ್ಯದ ಜನತೆಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ನಂಬಿಕೆ ಬಂದಿದೆ. ಇವು ನಮ್ಮ ಕೈ ಹಿಡಿಯಲಿವೆ. ಮೊದಲ ಹಂತದ ಚುನಾವಣೆಗಿಂತ ಎರಡನೇ ಹಂತದ ಚುನಾವಣೆಯಲ್ಲಿ ಎಐಸಿಸಿ ನೀಡಿದ ಗ್ಯಾರಂಟಿಗಳ ಜನರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿವೆ. ಗ್ಯಾರಂಟಿಗಳು ದೇಶದ ಜನರ ಮನಸ್ಸು ಗೆದ್ದಿವೆ ಎಂದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!