Tuesday, December 24, 2024
Homeಜಿಲ್ಲೆತಾಲ್ಲೂಕು ಆಡಳಿತದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಸರಳ ಆಚರಣೆ.

ತಾಲ್ಲೂಕು ಆಡಳಿತದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಸರಳ ಆಚರಣೆ.

ಶಿಡ್ಲಘಟ್ಟ : ಬೆಂಗಳೂರು ನಿರ್ಮಾತೃ ಒಕ್ಕಲಿಗರ ದೊರೆ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ್ದ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ವೇದಿಕೆ ಕಾರ್ಯಕ್ರಮದಲ್ಲಿ ಜಯಂತೋತ್ಸವವನ್ನ ಉದ್ದೇಶಿಸಿ ಮಾತನಾಡಿದ ಅವರು ಕೆಂಪೇಗೌಡರು ಕೇವಲ ಒಂದು ಸಮುದಾಯ, ಒಂದು ವರ್ಗಕ್ಕಾಗಿ ಅವರ ಆಡಳಿತದಲ್ಲಿ ಕೆಲಸ ಮಾಡಲಿಲ್ಲ. ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತೆ
ನಾಡಪ್ರಭು ಕೆಂಪೇಗೌಡರು ಈ ಭೂಮಿ ಇರುವ ತನಕ ಅವರ ಹೆಸರು ಶಾಶ್ವತವಾಗಿ ನೆಲೆಸಿರುತ್ತದೆ ಸಮಾಜಕ್ಕಾಗಿ ಒಳ್ಳೆಯ ಕೆಲಸಗಳು ಮಾಡುವವರ ಹೆಸರು ಶಾಶ್ವತವಾಗಿ ಉಳಿಯುತ್ತದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುಂಚೆ ಚಿಂತಾಮಣಿ – ಶಿಡ್ಲಘಟ್ಟ ರಸ್ತೆಯಲ್ಲಿರುವ ಕೆಂಪೇಗೌಡ ಸಭಾಂಗಣದ ಬಳಿಯಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆರಂಭಗೊಂಡಿತು. ಇದ್ಲೂಡು ರಸ್ತೆಯ ಪಟ್ರಹಳ್ಳಿ ಶ್ರೀಬಯಲಾಂಜನೇಯಸ್ವಾಮಿ
ದೇವಾಲಯದ ಬಳಿ ಗಿಡಗಳನ್ನು ನೆಡಲಾಯಿತು.

ಐ.ಆರ್.ಎಸ್ ಭಾರತದ ಆಡಳಿತ ಸೇವೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಂಸಶ್ರೀ ಅವರನ್ನು ಗಣ್ಯರು ಸನ್ಮಾನಿಸಿ ಅಭಿನಂಧಿಸಲಾಯಿತು.ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಹೆಚ್ಚು ಅಂಕಗಳು ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಧನ ನೀಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪಟೇಲ್ ನಾರಾಯಣಸ್ವಾಮಿ, ಶಿಕ್ಷಕರಾದ ಸುಂದರಚಾರಿ ನಾಡಗೀತೆ ಹಾಗೂ ರೈತ ಗೀತೆ ಹಾಡಿದರು.

ತಹಶೀಲ್ದಾರ್ ಬಿ.ಎನ್.ಸ್ವಾಮಿ, ತಾಲ್ಲೂಕು ಪಂಚಾಯಿತಿ ಇ.ಓ. ಎಸ್.ನಾರಾಯಣ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ
ಕೆ.ಎನ್.ಸುಬ್ಬಾರೆಡ್ಡಿ, ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಒಕ್ಕಲಿಗರ ಯುವಸೇನೆಯ ತಾಲ್ಲೂಕು ಅಧ್ಯಕ್ಷ ಜೆ.ವೆಂಕಟಸ್ವಾಮಿ, ರೈತಸಂಘದ ರಾಜ್ಯ ಕಾರ್ಯಾಧ್ಯಕ್ಷ
ಭಕ್ತರಹಳ್ಳಿ ಬೈರೇಗೌಡ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಆನಂದ ಗೌಡ, ಬಂಕ್ ಮುನಿಯಪ್ಪ, ರೈತ ಸಂಘದ ಬೆಳ್ಳೂಟಿ ಮುನಿಕೆಂಪಣ್ಣ, ಭಕ್ತರಹಳ್ಳಿ ಪ್ರತೀಶ್, ಶೆಟ್ಟಹಳ್ಳಿ ರವಿಪ್ರಕಾಶ್, ಡಾಲ್ಫಿನ್ .ನಾಗರಾಜ್ ಸೇರಿದಂತೆ ಸಮುದಾಯದ ಮುಖಂಡರು, ಸಾರ್ವಜನಿಕರು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!