ಶಿಡ್ಲಘಟ್ಟ : ಜನ ಸಾಮಾನ್ಯರ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಆಗಬೇಕು, ಸರ್ಕಾರಿ ಕಛೇರಿಗಳಿಗೆ ಜನ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರವೇ ಜನರ ಮನೆ ಬಾಗಿಲಿಗೆ ಸೇವೆ ಒದಗಿಸುತ್ತಿದೆ. ಮನೆ ಬಾಗಲಿಗೆ ಬರಲಿದೆ ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಘೋಷ ವಾಕ್ಯದೊಂದಿಗೆ ಸಾರ್ವಜನಿಕರ ಕುಂದುಕೊರತೆಗಳು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಸ್ಥಳೀಯ ಮಟ್ಟದಲ್ಲೆ ನಿಯಮಾನುಸಾರ ಕೆಲಸ ಮಾಡಿಕೊಡುವ ಮಹತ್ಚದ ಕಾರ್ಯಕ್ಕೆ ಮುಂದಾಗಿದೆ.
ಸರ್ಕಾರದ ಆದೇಶಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಒಂದೇ ಸೂರಿನಡಿ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ” ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜುಲೈ 05 ನಾಳೆ ಶುಕ್ರವಾರ ಬೆಳಗ್ಗೆ 10:30 ಕ್ಕೆ ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಡಾ. ಪಿ.ಎನ್ ರವೀಂದ್ರ ಅವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದಲ್ಲಿ 2 ನೇ ಬಾರಿಗೆ ಜನ ಸ್ಪಂದನೆ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಅಹವಾಲುಗಳು ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ದಿನ ನಿತ್ಯ ಕಛೇರಿಗಳಿಗೆ ಅಲೆದಾಡುವಂತಹ ಸಂದರ್ಭದಲ್ಲಿ ಜನಪರ ಸರ್ಕಾರ ಜನ ಸಾಮಾನ್ಯರಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಜನಪರ ಕಾಳಜಿಯಿಂದ ನಡೆಸುತ್ತಿರುವ ಜನತಾ ದರ್ಶನ ಕಾರ್ಯಕ್ರಮವನ್ನ ನಾಗರೀಕರು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವುದು ಎಲ್ಲರ ಕರ್ತವ್ಯ ಹಾಗೂ ಜವಬ್ದಾರಿಯಾಗಿದೆ.
ವರದಿ: ಕೋಟಹಳ್ಳಿ ಅನಿಲ್ ಕುಮಾರ್. ಕೆ.ಎ