Tuesday, December 24, 2024
Homeಜಿಲ್ಲೆಭವಿಷ್ಯದ ದೃಷ್ಠಿಯಿಂದ ಸಂಪನ್ಮೂಲಗಳಿಗೆ ತಕ್ಕಂತೆ ಜನಸಂಖ್ಯೆ ನಿಯಂತ್ರಣ ಅಗತ್ಯ : ಶಾಸಕ ಬಿ.ಎನ್ ರವಿಕುಮಾರ್

ಭವಿಷ್ಯದ ದೃಷ್ಠಿಯಿಂದ ಸಂಪನ್ಮೂಲಗಳಿಗೆ ತಕ್ಕಂತೆ ಜನಸಂಖ್ಯೆ ನಿಯಂತ್ರಣ ಅಗತ್ಯ : ಶಾಸಕ ಬಿ.ಎನ್ ರವಿಕುಮಾರ್

ಶಿಡ್ಲಘಟ್ಟ : ವಿಶ್ವ ಜನಸಂಖ್ಯಾದಿನಾಚರಣೆಯನ್ನು ಪ್ರತಿ ವರ್ಷದಂತೆ ಜುಲೈ 11 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಜನಸಂಖ್ಯಾ ನಿಯಂತ್ರಣ ದೃಷ್ಠಿಯಿಂದ ಆರೋಗ್ಯ ಇಲಾಖೆ ರೂಪಿಸಿರುವ ಕುಟುಂಬ ಕಲ್ಯಾಣ ಯೋಜನೆಗಳನ್ನ ಜನರಿಗೆ ಸಮರ್ಪಕವಾಗಿ ಅರಿವು ಮೂಡಿಸುವ ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಬೇಕೆಂದು ಶಾಸಕ ಬಿ.ಎನ್ ರವಿಕುಮಾರ್ ತಿಳಿಸಿದರು.

ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಛೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ನಂತರ ಮಾತನಾಡಿದ ಅವರು ಪ್ರಕೃತಿಯ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಜನಸಂಖ್ಯೆ ನಿಯಂತ್ರಿಸುವುದೊಂದೇ ಏಕ ಮಾತ್ರ ಮಾರ್ಗವಾಗಿದೆ. ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಂತಾನ ನಿಯಂತ್ರಣಕ್ಕೆ ಔಷದಗಳು ಹಾಗೂ ಚುಚ್ಚು
ಮದ್ದುಗಳು ಬಂದಿವೆ. ಅವುಗಳ ಬಗ್ಗೆ ಅರಿತುಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಪ್ರಕೃತಿಯ ಸಂಪನ್ಮೂಲಗಳು ಸೀಮಿತವಾಗಿವೆ ಆದ್ದರಿಂದ ಭವಿಷ್ಯದ ಪೀಳಿಗೆಯ ಹಿತ ದೃಷ್ಠಿಯಿಂದ ಸಂಪನ್ಮೂಲಗಳಿಗೆ ತಕ್ಕಂತೆ ಜನಸಂಖ್ಯೆ ನಿಯಂತ್ರಣದಲ್ಲಿರುವುದು ತುಂಬ ಅಗತ್ಯ ಎಂದರು.

ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಭಾರತ ದೇಶ ಜನಸಂಖ್ಯೆಯಲ್ಲಿ ವಿಶ್ವದಲ್ಲೇ
ಮುಂಚೂಣಿಯಲ್ಲಿದೆ ಜನಸಂಖ್ಯೆ ಇದೇ ವೇಗದಲ್ಲಿ ಹೆಚ್ಚುತ್ತಾ ಹೋದರೆ ಮುಂದೊಂದು ದಿನ ಕುಡಿಯಲು ನೀರು ಹಾಗೂ ಉಸಿರಾಡಲು ಶುದ್ಧ ಗಾಳಿಯೂ ಸಿಗುವುದು ಕಷ್ಟವಾಗಬಹುದು . ಕಡಿಮೆ ವಯಸ್ಸಿನಲ್ಲಿ ಮದುವೆ ಆಗುವುದರಿಂದ ಹೆಚ್ಚು ಮಕ್ಕಳಾಗುತ್ತವೆ.
ಹಳ್ಳಿ ಪ್ರದೇಶಗಳಲ್ಲಿ 18 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಮುಂಚೂಣಿಯಲ್ಲಿದ್ದರೆ ಅಂತಹವರನ್ನು ಆಶಾ ಕಾರ್ಯಕರ್ತರು ಮನವೊಳಿಸಿ ತಿಳುವಳಿಕೆ ನೀಡಬೇಕು ಇಲ್ಲದಿದ್ದರೆ ಉಚಿತ ದೂರವಾಣಿಗೆ ಕರೆ ಮಾಡಿ ಹೇಳಿದರೆ ಅವರು ನಿಮ್ಮ ಹೆಸರನ್ನು ಯಾರಿಗೂ ತಿಳಿಸದೆ. ಬಂದು ಕಾನೂನಿನ ರೀತಿ ಕ್ರಮಗಳನ್ನು ತೆಗೆದುಕೊಂಡು ಅವರಿಗೆ ತಿಳುವಳಿಕೆ ಜೀಡುತ್ತಾರೆ.

ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ ಇವರು ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ವಹಿಸುವ ಮೂಲಕ ಎಲ್ಲರಿಗೂ ಅರಿವು ಮೂಡಿಸಲಾಯಿತು.

ಪ್ರತಿ ಹಳ್ಳಿಗಳಲ್ಲೂ ಆಶಾ ಕಾರ್ಯಕರ್ತರು ಹೆಚ್ಚಿನ ಗಮನವಹಿಸಿ ಡೆಂಗ್ಯೂ ಪ್ರಕರಣಗಳು ತಡೆಗಟ್ಟುವ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸಬೇಕು ಆಶಾಕಾರ್ಯಕರ್ತೆಯರ ಪಾತ್ರ ಮಹತ್ವವಾದದ್ದು.
ಹಾಗೂ ಪ್ರತಿ ಪಂಚಾಯಿತಿಗೆ ಸ್ವಚ್ಛತೆಯ ಬಗ್ಗೆ ಪಿಡಿಒ ಹಾಗೂ ಕಾರ್ಯದರ್ಶಜ ರವರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮೂರ್ತಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಚಂದ್ರಶೇಖರ್, ತಾಲ್ಲೂಕು‌ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮನೋಹರ್. ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮಂಜುನಾಥ್,ಬಿಇಒ ನರೇಂದ್ರ ಕುಮಾರ್. ತಾದೂರು ರಘು, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ರಾಮಚಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಎನ್ ಸುಬ್ಬಾರೆಡ್ಡಿ, ಸಿ‌ಡಿ.ಪಿ.ಓ. ನೌತಾಜ್, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್ ದೇವರಾಜ್,ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಹಾಜರಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!