ಶಿಡ್ಲಘಟ್ಟ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಗತ್ ಸಿಂಗ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಕ್ರೀಡೋತ್ಸವ 2024-25 ಆಯೋಜನೆ ಮಾಡಲಾಗಿದೆ ಎಂದು ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಜಯಂತಿಗ್ರಾಮ ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಜಯಂತಿಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಗಸ್ಟ್ 17 ಶನಿವಾರದಂದು ಬೆಳಗ್ಗೆ 11:30 ಕ್ಕೆ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಭಾಗವಹಿಸುವವರು ಇದೇ ಶಿಡ್ಲಘಟ್ಟ ತಾಲ್ಲೂಕಿನವರಾಗಿರಬೇಕು ಕ್ರೀಡಾಪಟುಗಳಿಗೆ ಉಪಹಾರದ ವ್ಯವಸ್ಥೆಯೂ ಮಾಡಲಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.