ಗೌರಿಬಿದನೂರು : ಗೆಲುವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಸೌಹಾರ್ದದಿಂದ ಭಾಗವಹಿಸಬೇಕು ಎಂದು ವಾಲ್ಮೀಕಿ ಸಮುದಾಯದ ಪ್ರಭಾವಿ ಮುಖಂಡ ಆರ್ ಅಶೋಕ್ ಕುಮಾರ್ ಅಭಿಪ್ರಾಯಪಟ್ಟರು.
ಗೌರಿಬಿದನೂರು ನಗರದ ಆಚಾರ್ಯ ಕಾಲೇಜಿನ ಕೃಷಿ ಮೈದಾನದಲ್ಲಿ ಆಯೋಜಿಸಿದ್ದ ವೈಪರ್ ಪ್ರೀಮಿಯರ್ ಲೀಗ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ’ಕ್ರೀಡೆಗಳು ದೈಹಿಕ ಮತ್ತು ಮಾನಸಿಕವಾಗಿ ನಮ್ಮ ಅಭಿವೃದ್ಧಿ ಮೂಲವಾಗಿದೆ. ಆದ್ದರಿಂದ ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು,ಕ್ರೀಡೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಹೊಂದಾಣಿಕೆ ಮನೋಭಾವ ಬರುತ್ತದೆ. ಪ್ರತಿನಿತ್ಯ ಅತ್ಯಂತ ಕ್ರಿಯಾಶೀಲರಾಗಿ ಕರ್ತವ್ಯನಿರ್ವಹಿಸಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು,ಕ್ರೀಡೆ ಎಂದ ಕೂಡಲೇ ಬಾಲ್ಯದ ಜೀವನ ಮತ್ತೆ ಮರುಕಳಿಸುತ್ತದೆ. ಕ್ರೀಡಾ ಮನೋಭಾವನೆಯಿಂದ ಆಟವಾಡಬೇಕು. ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದಾಗ ಮಾತ್ರ ಸೋಲು-ಗೆಲುವನ್ನು ಸಮಾನವಾಗಿ ಕಾಣಬಹುದು ಎಂದ ಅವರು ಕ್ರೀಡೆಯಲ್ಲಿ ಶಿಸ್ತು ಬಹುಮುಖ್ಯ ಜೀವನದಲ್ಲಿ ಶಿಸ್ತು ಬೆಳೆಸಿಕೊಂಡರೆ ನಾವು ಎಲ್ಲಾ ಕಡೆ ಯಶಸ್ಸು ಕಾಣಬಹುದು ಎಂದರು.
ಇದೇ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಮುಖಂಡರಾದ ಜಿ ಎಲ್ ಅಶ್ವತ್ಥನಾರಾಯಣ, ಪ್ರಭು, ನಾಗೇಶ್, ರಾಜಣ್ಣ, ಕ್ರಿಕೆಟ್ ಪಂದ್ಯಾವಳಿಯ ಸಂಯೋಜಕರಾದ ಬಸವರಾಜು, ಜಗದೀಶ್ ಹಾಗೂ ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು,