ಬೆಂಗಳೂರು: ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ದಾಖಲಾಗುವ ದಾವೆಗಳು ಹಾಗೂ ಮೇಲ್ಮನವಿ ಪ್ರಕರಣಗಳಿಗೆ ಸಂಬಂಧಿಸಿದ ಅರೆನ್ಯಾಯಿಕ ಪ್ರಕರಣಗಳ RCCMS ತಂತ್ರಾಂಶದ ಮೂಲಕ ಸರಿಯಾಗಿ ನಿರ್ವಹಣೆ ಮಾಡದೆ ಇರೋದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
RCCMS ತಂತ್ರಾಂಶದ ಮೂಲಕ ನಿರ್ವಹಿಸದೇ ಅಧಿಕಾರಿಗಳು ಪ್ರತಿಯೊಂದು ದಾವೆಗೂ ಲಂಚ ನಿಗಧಿ ಮಾಡಿಕೊಂಡಿರುವ ಕೆಲಸ ಮಾಡುತ್ತಿರುವುದಾಗಿ ಹಲವು ಪ್ರಕರಣಗಳಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿವ ರಾಜ್ಯದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶಿಸಿದ್ದಾರೆ.
ಈ ಹಿನ್ನಲೆಯಲ್ಲಿ ಕೆಎಎಸ್ ಅಧಿಕಾರಿ ವಿಶೇಷ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಉಪವಿಭಾಗಾಧಿಕಾರಿಗಳ ಅಕ್ರಮಗಳ ಕುರಿತು ತನಿಖೆಗೆ 12 ಅಧಿಕಾರಿಗಳ ತನಿಖಾ ತಂಡವನ್ನು ರಚಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ವಿಮಲಮ್ಮ ಆದೇಶವನ್ನು ಹೊರಡಿಸಿದ್ದಾರೆ.
ಕಂದಾಯ ಇಲಾಖೆಯ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆ ಉಪ ವಿಭಾಗಧಿಕಾರಿಗಳ ವಿಡಿಯೋ ಕಾನ್ಸೆರೆನ್ಸ್ ನಲ್ಲಿ ಅಕ್ರಮಗಳ ಕುರಿತು ಖುದ್ದು ಸಚಿವರೇ ಪ್ರಶ್ನಿಸಿದ್ರು. ಅದರಲ್ಲೂ ಬೆಂಗಳೂರು ಉತ್ತರ ವಲಯದಲ್ಲಿ 5419 ಹಾಗೂ ಬೆಂ.ದಕ್ಷಿಣ ವಲಯದಲ್ಲಿ 4351 ಪ್ರಕರಣಗಳು ಬಾಕಿಯಿದ್ದು, ಅಲ್ಲದೆ, ಈ ಎರಡೂ ವಿಭಾಗದಲ್ಲಿ ಅಧಿಕಾರಿಗಳು ಶೇ.65ಕ್ಕಿಂತ ಹೆಚ್ಚು ತನ್ನ ಕಾರ್ಯಕ್ಷೇತ್ರದ (ಜ್ಯೂರಿ ಸೆಕ್ಷನ್) ಹೊರಗಿನ ಪ್ರಕರಣಗಳನ್ನೂ ದಾಖಲಿಸಿಕೊಂಡಿದ್ದಾರೆ. ಪ್ರಕರಣಗಳ ಇತ್ಯರ್ಥವೂ ತೀರಾ ಆಮೆಗತಿಯಲ್ಲಿ ಸಾಗಿದೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಕೃಷ್ಣ ಬೈರೇಗೌಡ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದೇ ವೇಳೆ ಬೆಂ.ಉತ್ತರ ವಿಭಾಗಾಧಿಕಾರಿ ಪ್ರಮೋದ್ ಪಾಟೀಲ್ ಹಾಗೂ ಬೆಂ.ದಕ್ಷಿಣ ವಿಭಾಗಾಧಿಕಾರಿ ರಜನೀಕಾಂತ್ ಚೌವ್ಹಾಣ್ ವಿರುದ್ಧ ಸಚುವರು ಆಕ್ರೋಶ ಹೊರಹಾಕಿದ್ದಾರೆ. ನಿಮ್ಮ ಕಾರ್ಯಕ್ಷೇತ್ರದ ಹೊರಗಿನ ಪ್ರಕರಣಗಳನ್ನೂ ಕಾನೂನು ಬಾಹಿರವಾಗಿ ದಾಖಲಿಸಿಕೊಂಡಿದ್ದೀರ. ಹೀಗೆ ಮಾಡಲು ಎಷ್ಟು ಹಣ ತೆಗೆದುಕೊಂಡಿರಿ ಎಂದು ಕಠೋರವಾಗಿ ಪ್ರಶ್ನಿಸಿದರು. ನಾವು ಒಳ್ಳೆಯ ಮಾತಿನಿಂದ ಹೇಳಿದರೆ ನಿಮ್ಮ ತಲೆಗೆ ಹೋಗೋದೆ ಇಲ್ಲ, ನಿಮಗೆ ನಿಮ್ಮ ಭಾಷೆಯಲ್ಲೇ ಉತ್ತರ ನೀಡಬೇಕು ಎಂದು ಎಚ್ಚರಿಸಿದರು.
ಬಳಿಕ ಎಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಿ ಕಠಿಣ ಕ್ರಮ ಜರುಗಿಸುವಂತೆಯೂ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.
ಈ ಹಿನ್ನಲೆಯಲ್ಲಿ ತನಿಖಾ ತಂಡ ಸಮಗ್ರ ವಿಚಾರಣೆ ನಡೆಸಿ ಹಲವು ಶಿಫಾರಸ್ಸುಗಳ ಜೊತೆಗೆ ನೋಟೀಸ್ ಜಾರಿಗೊಳಿಸಿ ಕಠಿಣ ಕ್ರಮ ಜರುಗಿಸುವಂತೆಯೂ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.ಈ ಹಿನ್ನಲೆಯಲ್ಲಿ ತನಿಖಾ ತಂಡ ಸಮಗ್ರ ವಿಚಾರಣೆ ನಡೆಸಿ ಹಲವು ಶಿಫಾರಸ್ಸುಗಳ ಜೊತೆಗೆ ತನಿಖಾ ವರದಿಯನ್ನು ಸಲ್ಲಿಸುವ ಜವಬ್ದಾರಿಯನ್ನು ನೀಡಲಾಗಿದೆ. ಭ್ರಷ್ಟ ಎಸಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ತನಿಖಾ ವರದಿ ಆಧಾರದ ಮೇಲೆ ಭ್ರಷ್ಟಚಾರ ನಡೆಸಿರುವ ಎಸಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ!. ಸರ್ಕಾರಿ ಹುದ್ದೆಗಳಲ್ಲಿರುವ ಕೆಳ ಹಂತದ ಅಧಿಕಾರಿಗಳಿಂದ ಹಿಡಿದು ಉನ್ನತ ಮಟ್ಟದ ಅಧಿಕಾರಿಗಳವರೆಗೆ ಭ್ರಷ್ಟಾಚಾರ ನಡೆಯುತ್ತಿದೆ ಎಂಬುವುದಕ್ಕೆ ಇದೊಂದು ನಿದರ್ಶನವಾಗಿದ್ದು, ಇಂತಹ ಭ್ರಷ್ಟರಿಗೆ ಸರ್ಕಾರ ಚಾಟಿ ಏಟು ನೀಡಬೇಕಾಗಿದೆ.!