ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಶ್ಯಾಮಲಾ, ನೇತೃತ್ವದಲ್ಲಿ ದಾಳಿ, ಯಶಸ್ವಿ ಕಾರ್ಯಾಚರಣೆ.
ಶಿಡ್ಲಘಟ್ಟ: ಮೆಕ್ಕೆಜೋಳ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆ.ಜಿ.70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಬಾರ್ಲಹಳ್ಳಿ – ದಾಸರ್ಲಹಳ್ಳಿ ಸರಹದ್ದಿನ ಮೆಕ್ಕೆ ಜೋಳದ ಜಮೀನಿನಲ್ಲಿ ಗಾಂಜಾ ಗಿಡಗಳು ಬೆಳೆದಿದ್ದ ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪ @ ಲಂಬು ಬಿನ್ ಲೇ. ನಾರಾಯಣಪ್ಪ ರವರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎಸ್ ಪಿ ಕುಶಾಲ್ ಚೌಕ್ಸಿ ಸಾರಥ್ಯದಲ್ಲಿ ಡಿವೈಎಸ್‌ಪಿ ಮುರಳೀಧರ್, ಸರ್ಕಲ್ ಇನ್ಸ್ ಪೆಕ್ಟರ್ ಎಂ. ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಶ್ಯಾಮಲಾ, ನೇತೃತ್ವದಲ್ಲಿ ದಾಳಿ ಮಾಡಿ ತಪಾಸಣೆ ನಡೆಸಿದ ವೇಳೆ ಆರೋಪಿ ಜನಮಡುಗಪ್ಪ ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿರುವುದು ಪತ್ತೆಯಾಗಿದ್ದು, ಸುಮಾರು 4 ಕೆಜಿ 70 ಗ್ರಾಂ ನಷ್ಟು ಬೆಳೆದಿದ್ದ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕೃಷ್ಣಪ್ಪ, ಚಂದ್ರಶೇಖರ್, ಪ್ರತಾಪ್, ಶ್ರೀನಿವಾಸ್ ಮೂರ್ತಿ, ವಸಂತ್ ಕುಮಾರ್ ಇತರರು ಹಾಜರಿದ್ದರು.