Tuesday, December 24, 2024
Homeಜಿಲ್ಲೆತಂಬಾಕು ಮುಕ್ತ ಯುವ ಅಭಿಯಾನ 2.0 ಗೆ: ನ್ಯಾಯಾಧೀಶರಾದ ಬಿ. ಶಿಲ್ಪ ಚಾಲನೆ.

ತಂಬಾಕು ಮುಕ್ತ ಯುವ ಅಭಿಯಾನ 2.0 ಗೆ: ನ್ಯಾಯಾಧೀಶರಾದ ಬಿ. ಶಿಲ್ಪ ಚಾಲನೆ.

ಚಿಕ್ಕಬಳ್ಳಾಪುರ : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 60 ದಿನಗಳ ಕಾಲ “ತಂಬಾಕು ಮುಕ್ತ ಯುವ ಅಭಿಯಾನ 2.0” ಕಾರ್ಯಕ್ರಮ  ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಶಿಲ್ಪ ಅವರು ಉದ್ಘಾಟಿಸಿ ಮಾತನಾಡುತ್ತಾ, ಸಾರ್ವಜನಿಕರ ಆರೋಗ್ಯದ ಮೇಲೆ ದೊಡ್ಡ ಮಾರಕವಾಗಿ ಪರಿಣಮಿಸುತ್ತಿರುವಲ್ಲಿ ತಂಬಾಕು ಸೇವನೆಯು ಒಂದಾಗಿದೆ. ಆದ್ದರಿಂದ ಯುವಜನತೆ ಹಾಗೂ ವಿದ್ಯಾರ್ಥಿಗಳ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು, ಪೋಸ್ಕೋ ಕಾಯ್ದೆ, ಮಾನವ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.

ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಆರ್.ಐ. ಕಾಸಿಂ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಭಾರತದ ಎಲ್ಲಾ ನಾಗರೀಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ದೊಡ್ಡ ಅಪಾಯವಾಗಿದೆ. ಹೃದಯ ಸಂಬಂಧಿ ಕಾಯಿಲೆಗಳು, ಉಸಿರಾಟದ ಕಾಯಿಲೆಗಳು ಮತ್ತು ಕ್ಯಾನ್ಸರ್ ಸೇರಿದಂತೆ ಹೆಚ್ಚಿನ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ಇದು ಸಾಮಾನ್ಯ ಅಪಾಯಕಾರಿ ಅಂಶವಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ಮಹೇಶ್ ಕುಮರ್ ರವರು ಮಾತನಾಡಿ, ತಂಬಾಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ವಿಷಕಾರಿ ರಸಾಯನಿಕ ವಸ್ತುಗಳಿದ್ದು ಅದರಲ್ಲಿ 60ಕ್ಕೂ ಹೆಚ್ಚು ಕ್ಯಾನ್ಸರ್‌ ಕಾರಕ ವಸ್ತುಗಳಿವೆ. ಕರ್ನಾಟಕವು ದೇಶದಲ್ಲಿ 2 ನೇ ಅತಿ ಹೆಚ್ಚು ತಂಬಾಕನ್ನು ಬೆಳೆಯುವ ರಾಜ್ಯವಾಗಿದೆ. ಇತ್ತೀಚಿನ ದಿನಮಾನಗಳಲ್ಲಿ ಯುವಪೀಳಿಗೆಯು ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯವಾಗಿದ್ದು ಈ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಕಾರ್ಯನಿರ್ವಹಿಸುತ್ತಿರುತ್ತದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಎಂ.ಎಸ್. ಕೃಷ್ಣಪ್ರಸಾದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಲ್. ಮುನಿರಾಜು, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!