ಶಿಡ್ಲಘಟ್ಟ : ತಾಲ್ಲೂಕಿನ ಕೊತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ಆಂಜಿನಪ್ಪ (60 ವರ್ಷ) ಎಂಬ ವ್ಯಕ್ತಿ ತಾರೀಖು 19/06/2024 ರಂದು ಮನೆಯಿಂದ ಹೋಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ. ಸಂಬಂಧಿಕರು, ಗೊತ್ತಿರುವ ಎಲ್ಲಾ ಕಡೆಗಳಲ್ಲಿ ಕುಟುಂಬದವರು ಹುಡುಕಿದರೂ ಪತ್ತೆಯಾಗದ ಕಾರಣ ಕಾಣೆಯಾದ ತನ್ನ ಗಂಡ ಆಂಜಿನಪ್ಪ (60) ರವರನ್ನು ಪತ್ತೆ ಮಾಡಿಕೊಡುವಂತೆ ಲಕ್ಷ್ಮೀನರಸಮ್ಮ ರವರು ನೀಡಿದ ದೂರಿನ ಮೇರೆಗೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಜಿನಪ್ಪ(60 ವರ್ಷ) ಎಂಬ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹತ್ತಿರ ಪೊಲೀಸ್ ಠಾಣೆಗೆ ಹಾಗೂ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ಅಥವಾ ಮಕ್ಕಳಾದ ರಮೇಶ್ (ಮೊ 9741340093) ಸುನಿಲ್ (9845177972) ರವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯ ಮೂಲಕ ಕೋರಿದ್ದಾರೆ.