ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ಲೋಕಾರ್ಪಣೆ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ.
ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ನಾಳೆ ಅಂದರೆ ಅಕ್ಟೋಬರ್ 5 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತಹ ಹಲವು ಕಡೆ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10:30 ಗಂಟೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಕಟ್ಟಡ ಲೋಕಾರ್ಪಣೆ ಮತ್ತು ನಾಯನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಣ ಕಟ್ಟಡ ಲೋಕಾರ್ಪಣೆ ಹಾಗೂ ರೆಡ್ಡಿಗೊಲ್ಲರಹಳ್ಳಿಯ ಜಿಲ್ಲಾ ಲಸಿಕಾ ಉಗ್ರಾಣ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದಾದ ನಂತರ ಮಧ್ಯಾಹ್ನ 12 ಗಂಟೆಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿರುವ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ 12 ಹಾಸಿಗೆಗಳ ಐಸೋಲೇಶನ್ ವಾರ್ಡ್ ಮತ್ತು ಬಿ.ಪಿ.ಹೆಚ್.ಯು ಲ್ಯಾಬ್ ಲೋಕಾರ್ಪಣೆ ಹಾಗೂ ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ, ಬಶೆಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಮುರುಗಮಲ್ಲ ಹಜರತ್ ಫಕೀಜಾ ದರ್ಗಾ ಆವರಣದಲ್ಲಿ ಆಯೋಜಿಸಿರುವ ಮಾನಸಿಕ ಆರೋಗ್ಯ ಕೇಂದ್ರ ಕಟ್ಟಡ ಲೋಕಾರ್ಪಣೆ ಹಾಗೂ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯ ಬಿ.ಪಿ.ಹೆಚ್.ಯು ಲ್ಯಾಬ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 5 ಗಂಟೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿರುವ ಚಾಕವೇಲು ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ 12 ಹಾಸಿಗೆಗಳ ಐಸೋಲೇಶನ್ ವಾರ್ಡ್ ಮತ್ತು ಬಿ.ಪಿ.ಹೆಚ್.ಯು ಲ್ಯಾಬ್ ಲೋಕಾರ್ಪಣೆ ಹಾಗೂ ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 6 ಹಾಸಿಗೆಗಳ ಐಸೋಲೇಶನ್ ವಾರ್ಡ್ ಲೋಕಾರ್ಪಣೆ, ಜಿ ಮದ್ದೇಪಲ್ಲಿ ಕ್ರಾಸ್ ಪ್ರಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಕಾಮಗಾರಿ ಶಂಕುಸ್ಥಾಪನೆ ಹಾಗೂ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ 12 ಹಾಸಿಗೆಗಳ ಐಸೋಲೇಶನ್ ವಾರ್ಡ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಸಂಜೆ 6:30 ಗಂಟೆಗೆ ಬಾಗೇಪಲ್ಲಿಯಿಂದ ಬೆಂಗಳೂರಿಗೆ ತೆರಳಿದ್ದಾರೆ.