Monday, December 23, 2024
Homeರಾಜ್ಯಮಳೆ ಹಾನಿ : ಅತಿವೃಷ್ಟಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಡಿಸಿಗಳಿಗೆ ಸಿ.ಎಂ.ಸೂಚನೆ.

ಮಳೆ ಹಾನಿ : ಅತಿವೃಷ್ಟಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಡಿಸಿಗಳಿಗೆ ಸಿ.ಎಂ.ಸೂಚನೆ.

ಮನೆ ಹಾನಿ, ಪ್ರಾಣ ಹಾನಿಗೆ 48 ದಿನದಲ್ಲಿ ಪರಿಹಾರ ಬಿಡುಗಡೆ | ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ.


ಬೆಂಗಳೂರು: ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.ಹಿಂಗಾರು ಅವಧಿಯ ಅಕ್ಟೋಬ‌ರ್ ನಿಂದ ಡಿಸೆಂಬರ್ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಯಲ್ಲಿ ಎದುರಾಗಬಹು ದಾದ ಸಂಕಷ್ಟಪರಿಸ್ಥಿತಿಗಳನ್ನು ಅರಿತು ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳ ಬೇಕೆಂದು ಅವರು ಸೂಚನೆ ನೀಡಿದರು.

ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು. ಈ ಬಾರಿ ಜಲವಿದ್ಯುತ್ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಕಣಿವೆ ಹಾಗೂ ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

3-4 ದಿನದಲ್ಲಿ ಬೆಳೆ ಹಾನಿ ಸಮೀಕ್ಷೆ ಪೂರ್ಣ ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸುವಂತೆ ಸೂಚಿಸಿದರು. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾ‌ರ್ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ರೂಪಾಯಿ ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಲು ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಕೆರೆ ಒತ್ತುವರಿ ತೆರವಿಗೆ ಕಟ್ಟಪ್ಪಣೆ : ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

25 ಜನರ ಸಾವು : ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಅತಿವೃಷ್ಟಿಯಿಂದಾಗಿ 19 ದೊಡ್ಡಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್‌ಡಿಆರ್‌ಎಫ್‌ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು ರೂ. 6.84 ಲಕ್ಷ, ಸಣ್ಣ ಜಾನುವಾರುಗಳಿಗೆ ಒಟ್ಟು ರೂ.2.8 ಲಕ್ಷ ಸೇರಿದಂತೆ ಒಟ್ಟು ರೂ. 9.6 ಲಕ್ಷ ಪರಿಹಾರ ಪಾವತಿಸಲಾಗಿದೆ.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!