ಬೆಂಗಳೂರು : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾವಿ ಮುಖಂಡರಾದ ಸೀಕಲ್ ರಾಮಚಂದ್ರ ಗೌಡ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಬೇಟಿ ಮಾಡಿ ಹೂ ಗುಚ್ಚ ನೀಡಿ ಹುಟ್ಟು ಹಬ್ಬದ ಶುಭಾಶಯಗಳು ಕೋರಿದ್ದಾರೆ.
ರಾಜ್ಯ, ರಾಷ್ಟ್ರ ಮಟ್ಟದ ನಾಯಕರ ನಡುವೆ ಉತ್ತಮ ಸಂಪರ್ಕ ಹೊಂದಿರುವ ಸೀಕಲ್ ರಾಮಚಂದ್ರಗೌಡರು ತಮ್ಮ ಪಕ್ಷದ ನಾಯಕ ಬಿ.ವೈ. ವಿಜಯೇಂದ್ರ ರವರ ಹುಟ್ಟು ಹಬ್ಬದ ಪ್ರಯುಕ್ತ ಬೇಟಿ ಮಾಡಿ ಶುಭಾಶಯಗಳು ಕೋರಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಈ ವೇಳೆ ವಿಧಾನಸಭಾ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ: ಪ್ರಸ್ತುತ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಗೆ ಕಾವು ಜೋರಾಗಿದ್ದು, ಆಡಳಿತದಲ್ಲಿರುವ ಕಾಂಗ್ರೇಸ್ ತಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರಗಾರಿಕೆ ಮಾಡುತ್ತಿದ್ದು, ಇನ್ನು ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎರಡೂ ಪಕ್ಷದ ನಾಯಕರು ಪಣ ತೊಟ್ಟಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಕುರುಕ್ಷೇತ್ರ ನಡೆಯುತ್ತಿದೆ. ಅಭ್ಯರ್ಥಿಗಳ ಗೆಲುವಿಗೆ ತಂತ್ರ ಪ್ರತಿ ತಂತ್ರ ಜೋರಾಗಿದೆ.
ವಕ್ಪ್ ವಿವಾದ: ವಕ್ಪ್ ವಿವಾದ ಮುನ್ನಲೆಗೆ ಬಂದಿದ್ದು, ಬಿಜೆಪಿ ಪಕ್ಷ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸ ಮಾಡಿದೆ. ಈಗಾಗಲೇ ಪಹಣಿಯಲ್ಲಿ ನಮೂದಾಗಿರುವ ವಕ್ಪ್ ಹೆಸರನ್ನು ತೆರವುಗೊಳಿಸಬೇಕು ಎಂದು ವಿಪಕ್ಷ ಪಟ್ಟು ಹಿಡಿದಿದೆ.