Monday, December 23, 2024
Homeರಾಜ್ಯಲಾಕಪ್ ಡೆತ್ ಪ್ರಕರಣ: 4 ಪೊಲೀಸರಿಗೆ 7 ವರ್ಷ ಸಜೆ.!

ಲಾಕಪ್ ಡೆತ್ ಪ್ರಕರಣ: 4 ಪೊಲೀಸರಿಗೆ 7 ವರ್ಷ ಸಜೆ.!

ಬೆಂಗಳೂರು: ಅನುಮಾನಾಸ್ಪದವಾಗಿ ವಶಕ್ಕೆ ಪಡೆದಿದ್ದ ವ್ಯಕ್ತಿಯು ಠಾಣೆಯಲ್ಲಿಯೇ (ಲಾಕಪ್ ಡೆತ್) ಸಾವನ್ನಪ್ಪಿದ ಪ್ರಕರಣದಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ ಸಿಐಡಿ ವಿಶೇಷ ನ್ಯಾಯಾಲಯವು ಆದೇಶಿಸಿದೆ.

ಒಡಿಶಾ ಮೂಲದ ಮಹೇಂದ್ರ ರಾಥೋಡ್ (42) ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣರಾಗಿದ್ದ ಆರೋಪದಡಿ ಪೊಲೀಸ್ ಸಿಬ್ಬಂದಿಗೆ ಕೋರ್ಟ್‌ನಿಂದ ಶಿಕ್ಷೆ ಪ್ರಕಟವಾಗಿದೆ. ಜೀವನ್ ಭೀಮಾನಗರ ಠಾಣೆಯ ಅಂದಿನ ಅಪರಾಧ ವಿಭಾಗದ ಹೆಡ್ ಕಾನ್ಸ್ ಟೇಬಲ್ ಎಜಾಜ್ ಖಾನ್, ಕಾನ್ಸ್ ಟೇಬಲ್‌ಗಳಾದ ಕೇಶವ ಮೂರ್ತಿ, ಕಾನ್ಸ್‌ಟೇಬಲ್ ಮೋಹನ್ ರಾಮ್ ಹಾಗೂ ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ 7 ವರ್ಷಗಳ ಸಜೆ ಹಾಗೂ 30 ಸಾವಿರ ಹಾಗೂ 25 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ: ಜೀವನ್ ಭೀಮಾನಗರ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಶಂಕಿತ ಆರೋಪಿಯಾಗಿದ್ದ ಮಹೇಂದ್ರ ರಾಥೋಡ್ ಎಂಬಾತನನ್ನು 2016ರ ಮಾರ್ಚ್ 19ರಂದು ಠಾಣೆಗೆ ಕರೆತರಲಾಗಿತ್ತು. ಹೆಚ್ ಎಎಲ್ 2ನೇ ಹಂತದಲ್ಲಿರುವ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ರಾಥೋಡ್, ಅದೇ ಮನೆಯಲ್ಲಿ 3.2 ಲಕ್ಷ ರೂ. ಕಳ್ಳತನ ಮಾಡಿದ್ದ ಆರೋಪ ಕೇಳಿಬಂದಿತ್ತು.

ಅದರಂತೆ ಠಾಣೆಗೆ ಕರೆತಂದಿದ್ದ ಮಹೇಂದ್ರ ರಾಥೋಡ್ ಸಂಜೆ ವೇಳೆಗೆ ಉಸಿರಾಟದ ತೊಂದರೆ, ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಸಾವನ್ನಪ್ಪಿದ್ದ. ಪೊಲೀಸ್ ಸಿಬ್ಬಂದಿಯ ನಿರ್ಲಕ್ಷ್ಯತೆ ಹಾಗೂ ದೈಹಿಕವಾಗಿ ಹಲ್ಲೆ ಮಾಡಿದ್ದರ ಪರಿಣಾಮವಾಗಿ ಆತನು ಪೊಲೀಸ್‌ ವಶದಲ್ಲಿದ್ದಾಗ ಮೃತಪಟ್ಟಿರುವುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿತ್ತು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!