ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ.
ಚಿಕ್ಕಬಳ್ಳಾಪುರ : ಫೆಂಗಲ್ ಚಂಡುಮಾರತದಿಂದ ಜಡಿ ಮಳೆ ವಿಪರೀತ ಚಳಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಮಕ್ಕಳ ಆರೋಗ್ಯ ದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಶಾಲಾ ಕಾಲೇಜುಗಳಿಗೆ ರಜೆಯನ್ನ ಘೋಷಿಸಿದ್ದಾರೆ.
ಫೆಂಗಲ್ ಸೈಕ್ಲೋನಿಂದ ವಿಪರೀತ ಚಳಿ, ಜಡಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ ಕಾಲೇಜುಗಳ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಡಿಸೆಂಬರ್ 2 ಸೋಮವಾರದಂದು ರಜೆಯನ್ನು ಘೋಷಣೆ ಮಾಡಲಾಗಿದೆ. ಇಂದಿನ ತರಗತಿಗಳು ಮತ್ತೊಂದು ದಿನ ನಡೆಸುವಂತೆ ಸೂಚನೆ ನೀಡಿದ್ದಾರೆ.