ಚಿಕ್ಕಬಳ್ಳಾಪುರ : ಹೆಚ್.ಐ.ವಿ ಸೋಂಕಿತರನ್ನು ಕೀಳಾಗಿ ನೋಡುವುದು ಸರಿಯಲ್ಲ. ಅನಿವಾರ್ಯ ಕಾರಣಗಳಿಂದ ಈಗಾಗಲೇ ಸೋಂಕಿಗೆ ಒಳಗಾಗಿರುವವರನ್ನು ನೈತಿಕವಾಗಿ ಬೆಂಬಲಿಸುವಂತಹ ದೃಷ್ಟಿಕೋನ ಸಮಾಜದಲ್ಲಿ ನಿರ್ಮಾಣವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನೇರಳೆ ವೀರಭದ್ರಯ್ಯ ಭವಾನಿ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಪೋಲೀಸ್ ಇಲಾಖೆ, ನಂದಿ ವೈದ್ಯಕೀಯ ಮಹಾವಿದ್ಯಾಲಯ, ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಜಿಲ್ಲಾ ಏಡ್ಸ್ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ಭಾರತೀಯರೆಡ್ ಕ್ರಾಸ್ ಸಂಸ್ಥೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳು,ಚಿಕ್ಕಬಳ್ಳಾಪುರ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ಸರ್ಕಾರಿ ಪ್ರಥಮ ದರ್ಜೆಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆಯ ಜಿಲ್ಲಾ
ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೆಚ್.ಐ.ವಿ ಸೋಂಕು ಅಸುರಕ್ಷಿತ ಲೈಂಗಿಕ ಕ್ರೀಯೆಯಿಂದ, ಅಸುರಕ್ಷಿತ ಚುಚ್ಚು ಮದ್ದುಗಳಸಲಕರಣೆಗಳ ಪುನರ್ ಬಳಕೆಯಿಂದ, ಸೋಂಕಿತ ಗರ್ಭಿಣಿಯರಿಂದ ಶಿಶುಗಳಿಗೆ ಹಾಗೂ ಇನ್ನಿತರರೀತಿಯ ಬೇರೆ ಬೇರೆ ಕಾರಣಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಸೋಂಕು ಹರಡುತ್ತದೆ. ಹೆಚ್ ಐ ವಿ ಸೋಂಕಿತ ವ್ಯಕ್ತಿಯು ಏಡ್ಸ್ ರೋಗಕ್ಕೆ ಒಳಗಾಗುತ್ತಾರೆ. ಇದೊಂದು ರಕ್ತದಿಂದ ಹರಡುವಕಾಯಿಲೆಯಾಗಿದೆ. ಆದ್ದರಿಂದ ಹೆಚ್.ಐ.ವಿಸೋಂಕು ಹರಡದಂತೆ ತಡೆಗಟ್ಟುವ ಬಗ್ಗೆ ಎಲ್ಲರಲ್ಲೂ ಸೂಕ್ತಅರಿವು ಮೂಡಿಸಬೇಕು. ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟುಒಳ್ಳೆಯ ದಾರಿಯಲ್ಲಿ ನಡೆಯಬೇಕು. ಹೆಚ್.ಐ.ವಿ ಸೋಂಕಿತ ವ್ಯಕ್ತಿಗಳಿಗೆ ನೈತಿಕ ಬೆಂಬಲವನ್ನು ನೀಡಬೇಕು. ಸರ್ಕಾರವು ಹೆಚ್.ಐ.ವಿ ಸೋಂಕಿತರಿಗೆ ಹಲವು ರೀತಿಯ ಸೌಲಭ್ಯಗಳ ಮುಖಾಂತರನೆರವಾಗಲು ಮುಂದಾಗುತ್ತಿದೆ, ಈ ಸೌಲಭ್ಯಗಳನ್ನು ಸೋಂಕಿತರು ಸದುಪಯೋಗಪಡಿಸಿಕೊಳ್ಳಬೇಕು. ಸಮಾಜದಲ್ಲಿರುವ ಎಲ್ಲರೂ ಒಂದಾಗಿ ಏಡ್ಸ್ ವಿರುದ್ಧ ಜಾಗೃತಿಯೊಂದಿಗೆ ಹೋರಾಡಿದರೆ ಹೆಚ್.ಐ.ವಿ ವೈರಸ್ಸನ್ನು ಮುಕ್ತಗೊಳಿಸಲು ಸಾಧ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಏಡ್ಸ್ ತಡೆಗಟ್ಟಲು ಅರಿವು ಮೂಡಿಸುವ ಜಾಥಾವು ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಿಂದ ಆರಂಭವಾಗಿ ಶಿಡ್ಲಘಟ್ಟ ರಸ್ತೆಯ ಮೂಲಕ ಸರ್ಕಾರಿಪ್ರಥಮ ದರ್ಜೆ ಮಹಿಳಾ ಕಾಲೇಜಿನ ವರೆಗೂ ಸಾಗಿತ್ತು. ಈ ವೇಳೆ ವಿದ್ಯಾರ್ಥಿಗಳು, ಸ್ವಯಂ ಸೇವಾಸಂಸ್ಥೆಗಳ ಸದಸ್ಯರು, ಕಾರ್ಯಕರ್ತರು ಸಾರ್ವಜನಿಕರು ಏಡ್ಸ್ ಕಾಯಿಲೆಯ ವಿರುದ್ದ ಜಾಗೃತಿಮೂಡಿಸುವ ಫಲಕಗಳನ್ನು ಹಾಗೂ ಬ್ಯಾನರ್ ಗಳನ್ನು ಪ್ರದರ್ಶಿಸಿದರು. ಈ ವೇಳೆ ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ, ಜಾಗೃತಿ ಮೂಡಿಸಿದರು.
ಜಿಲ್ಲಾ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್ ಮಾತನಾಡಿ ಜಗತ್ತನ್ನೇಕಾಡಿದ ಮಾರಕ ರೋಗಗಳಲ್ಲಿ ಏಡ್ಸ್ ರೋಗವು ಕೂಡ ಒಂದು. ಇದೊಂದು ರಕ್ತದಿಂದ ಹರಡುವಕಾಯಿಲೆಯಾಗಿದೆ. ಈ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಏಡ್ಸ್ದಿನವನ್ನು 1988ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು. ಅಂದಿನಿಂದ ಜಾಗೃತಿ ಮೂಡಿಸುವಕಾರ್ಯಗಳನ್ನು ನಿರಂತರವಾಗಿ ನಡೆಸುವಜೊತೆಗೆ ವಿಶ್ವ ಏಡ್ಸ್ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ 2024ರ ವಿಶ್ವ ಏಡ್ಸ್ ದಿನದ ಘೋಷವಾಕ್ಯವಾದ “ಸರಿಯಾದ ಮಾರ್ಗದಲ್ಲಿ ಹಕ್ಕುಗಳನ್ನು ಪಡೆಯೋಣ ನನ್ನ ಆರೋಗ್ಯ,ನನ್ನ ಹಕ್ಕು” ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಏಡ್ಸ್ ನ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಸಾಧನೆ ಗೈದ ವ್ಯಕ್ತಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿಗಳು ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಡಿ.ಟಿ ಉಮಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಮಂಜುಳ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಚಂದ್ರಯ್ಯ, ಡಾ. ನರಸಿಂಹಮೂರ್ತಿ, ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.