ಡಿಸೆಂಬರ್ 20,21,ಮತ್ತು 22 ರಂದು 87 ನೇ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ.
ಶಿಡ್ಲಘಟ್ಟ : ಡಿಸೆಂಬರ್ ೨೦,೨೧, ಮತ್ತು ೨೨ ಮೂರು ದಿನಗಳ ಕಾಲ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕ್ರೀಯಾಶೀಲ ಅಧ್ಯಕ್ಷರಾದ ಶ್ರೀ ನಾಡೋಜ ಡಾ. ಮಹೇಶ್ ಜೋಶಿಯವರ ಸಾರಥ್ಯದಲ್ಲಿ ಜಾನಪದ ತಜ್ಞರು, ಪ್ರಖ್ಯಾತ ಸಾಹಿತಿಗಳೂ ಆದ ಶ್ರೀ ಗೂ -ರು ಚನ್ನಬಸಪ್ಪನವರ ಸರ್ವಾಧ್ಯಕ್ಷತೆಯಲ್ಲಿ ಕರ್ನಾಟಕ ಸರ್ಕಾರ ಮಂಡ್ಯ ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಇವರ ಸಹಯೋಗದೊಂದಿಗೆ ನೆರವೇರಿಸುತ್ತಿರುವ ಐತಿಹಾಸಿಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಿಡ್ಲಘಟ್ಟ ತಾಲ್ಲೂಕಿನ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು, ಪದಾಧಿಕಾರಿಗಳು, ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾದ ಪಟೇಲ್ ನಾರಾಯಸ್ವಾಮಿ ಅವರು ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನ ಯಶಸ್ವಿಗೊಳಿಸಲು ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಕ್ಷಿಯಾಗಬೇಕು ಬನ್ನಿ ಭಾಗವಹಿಸಿ, ತಮ್ಮೆಲ್ಲರಿಗೂ ಆತ್ಮೀಯ ಆಮಂತ್ರಣ , ಎಲ್ಲರೂ ಭಾಗವಹಿಸೋಣ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.
ಸಾಮಾಜಿಕ ಜಾಲತಾಣಗಳ ಮೂಲಕ ಹೆಚ್ಚು ಪ್ರಚಾರ ಮಾಡುವ ಮೂಲಕ ಜನರಿಗೆ ವಿಷಯವನ್ನ ತಿಳಿಸುವ ಕೆಲಸ ಮಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಭಾಗವಹಿಸುವ ಶಿಡ್ಲಘಟ್ಟ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರು, ವಸತಿ ಊಟಕ್ಕಾಗಿ ತಮ್ಮ ಮೊಬೈಲ್ ಸಂಖ್ಯೆ 8453508169 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.