‘ಸಂವಿಧಾನ ಶಕ್ತಿ ನ್ಯೂಸ್’ ಚಿಕ್ಕಬಳ್ಳಾಪುರ : ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟ ಚಿಂತಾಮಣಿ ರಸ್ತೆಯ ತಮ್ಮನಾಯಕನಹಳ್ಳಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ತಮ್ಮನಾಯಕನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ ಅಲಿಯಾಸ್ ವಾಚ್ ವೆಂಕಟೇಶ್ ಎಂದು ಗುರುತಿಸಲಾಗಿದೆ.
ತಮ್ಮನಾಯಕನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಎಲೆಕ್ಟ್ರಿಕ್ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೆಂಬತ್ತಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನ ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಸದ್ಯ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.