ತಾಲ್ಲೂಕು ಆಡಳಿತ, ರಾಷ್ಟ್ರೀಯ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಮಾನವ ಕುವೆಂಪು ಜನ್ಮ ದಿನ ಆಚರಣೆ.
‘ಸಂವಿಧಾನ ಶಕ್ತಿ ನ್ಯೂಸ್ ‘ ಶಿಡ್ಲಘಟ್ಟ : ಯಾವುದೇ ವ್ಯಕ್ತಿ ಜಾತಿ, ಧರ್ಮ,ಬಿಟ್ಟು, ಮಾನವೀಯ ಮೌಲ್ಯಗಳಿಂದ ಮನುಷ್ಯತ್ವದಿಂದ ಒಬ್ಬ ಮನುಷ್ಯ ಮತ್ತೊಬ್ಬ ಮನುಷ್ಯನನ್ನು ನೋಡಿದಾಗಷ್ಟೇ ನಾವು ಈ ಸಮಾಜದಲ್ಲಿ ಶಾಂತಿಯುತವಾಗಿ ಸಹಬಾಳ್ವೆಯಿಂದ ಬದುಕಲು ಸಾದ್ಯವೆಂದು ವಿಶ್ವಮಾನ ಕುವೆಂಪು ಅವರು ಸಮಾಜಕ್ಕೆ ಸಂದೇಶಕ್ಕೆ ಸಾರಿದ್ದಾರೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್ ಹೇಮಾವತಿ ತಿಳಿಸಿದರು.
ರಾಷ್ಟ್ರೀಯ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ “ವಿಶ್ವಮಾನವ ಕುವೆಂಪು” ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ, ಆ ನಂತರ ಆ ಮಗುವನ್ನು ಜಾತಿ,ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಮಾತನಾಡಿ, ವಿಶ್ವಮಾನ ಕುವೆಂಪು ಅವರು ತಮ್ಮ ಕೃತಿಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಅಪಾರವಾದ ಕೊಡುಗೆ ನೀಡಿದ್ದಾರೆ. ಮಾನವನನ್ನು ವಿಶ್ವ ಮಾನವ ಮಾಡಬೇಕೆನ್ನುವುದು ಕುವೆಂಪು ಅವರ ಕನಸಾಗಿದ್ದು, ಪ್ರತಿಯೊಬ್ಬರಲ್ಲೂ ಇರುವ ವ್ಯಕ್ತಿ ಸ್ವಾತಂತ್ರ್ಯ ವನ್ನು ಗೌರವಿಸಬೇಕು ಎನ್ನುವುದು ಇದರ ನಿಯಮ. ಆದ್ದರಿಂದ ಅವರು ಹುಟ್ಟಿದ ದಿನವನ್ನು ವಿಶ್ವಮಾನವ ದಿನಾಚರಣೆಯಾಗಿ ಆಚರಿಸುತ್ತಾರೆ. ಕುವೆಂಪು ಅವರ ಕೃತಿಗಳ ಪುಸ್ತಕಗಳು ಸಂಗ್ರಹಿಸಿ ಓದುವ ಹವ್ಯಾಸ ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಎಂದರು
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕುವೆಂಪುರವರ ಬಗ್ಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಚೈತನ್ಯ. ಎನ್ ( ಪ್ರಥಮ ಸ್ಥಾನ – ಬಿಜಿಎಸ್ ಶಾಲೆ) ದ್ವಿತೀಯ ಸ್ಥಾನ – ಮಾನಸ ( ಜಿ.ಹೆಚ್.ಎಸ್ ಜಂಗಮಕೋಟೆ) ತೃತೀಯ ಸ್ಥಾನ – ಡಿಂಪಲ್ B (ಸಾಹಿತ್ಯ ಶಾಲೆ.. H -ಕ್ರಾಸ್) ಅವರನ್ನ ಅಭಿನಂಧಿಸಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್ ಸುಬ್ಬಾರೆಡ್ಡಿ ,
ನಗರಸಭೆ ಪೌರಾಯುಕ್ತ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಕಸಾಪ ತಾಲೂಕ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ವಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಗ್ರೇಡ್ – 2 ತಹಶೀಲ್ದಾರ್ ಪೂರ್ಣಿಮಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು