ಶಿಡ್ಲಘಟ್ಟ: ಆರೋಗ್ಯಕರ ಜೀವನ ನಡೆಸಬೇಕಾದರೆ ನಿತ್ಯ ಯೋಗಾಭ್ಯಾಸ ಮಾಡುವುದು ಅತ್ಯವಶ್ಯಕ ಯೋಗಕ್ಕೆ ಹೆಚ್ಚು ಪ್ರಾಶಸ್ತ್ಯ ಬಂದಿದ್ದು, ದೇಶದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರಿಂದ, ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪ್ರಭಾವಿ ಬಿಜೆಪಿ ಮುಖಂಡರು ಹಾಗೂ ಖ್ಯಾತ ಉದ್ಯಮಿ ಸೀಕಲ್ ರಾಮಚಂದ್ರಗೌಡ ಅಭಿಪ್ರಾಯಪಟ್ಟರು
ನಗರದ ಮಯೂರ ವೃತ್ತದ ಬಳಿಯಿರುವ ಬಿಜೆಪಿಯ ಸೇವಾ ಸೌಧ ಕಛೇರಿಯ ಆವರಣದಲ್ಲಿ ಶುಕ್ರವಾರ ಬೆಳ್ಳಂ ಬೆಳಗ್ಗೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಪತಂಜಲಿ ಯೋಗ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಯೋಗಭ್ಯಾಸ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತದ ಸಂಸ್ಕೃತಿಯನ್ನು ಸಹ ಯೋಗದ ಮೂಲಕ ಪರಿಚಯ ಮಾಡಲಾಗಿದೆ. ಯೋಗ ಮಾಡಿದರೆ ಅನಾರೋಗ ದೂರವಾಗುತ್ತದೆ. ಪ್ರತಿಯೊಬ್ಬರು ಯೋಗಭ್ಯಾಸದ ಜೀವನ ರೂಢಿಸಿಕೊಳ್ಳಬೇಕು. ಯೋಗದಿಂದ ಸದೃಢ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ. ಯೋಗ ಸರ್ವರೋಗಕ್ಕೂ ಮದ್ದು ಅದನ್ನು ಯಾರು ಮರೆಯಬಾರದು. ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರತಿ ದಿನ ಜೀವನದ ಅವಿಭಾಜ್ಯ ಅಂಗವಾಗಿ ಯೋಗವನ್ನು ರೂಢಿಸಿಕೊಳ್ಳಬೇಕು. ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯಾಗಿರುವುದರ ಹಿಂದೆ ಪ್ರಧಾನಿ ಮೋದಿ ಅವರ ಕೊಡುಗೆಯಿದೆ ಎಂದರು.
10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿಡ್ಲಘಟ್ಟ ಬಿಜೆಪಿ ಕಚೇರಿಯಲ್ಲಿ ಯೋಗ ಗುರುಗಳಾದ ಶ್ರೀಕಾಂತ್, ಕೇಶವ್ ಮೂರ್ತಿ ಮತ್ತು ರಮಣ ರವರ ನೇತೃತ್ವದಲ್ಲಿ ಯೋಗಾಬ್ಯಾಸವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ ರಾಜಣ್ಣ, ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ನಗರಾಧ್ಯಕ್ಷ ನರೇಶ್ ರೈತ ಮೋರ್ಚಾ ಅಧ್ಯಕ್ಷ ವೆಂಕಟ್ ರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ತ್ರಿವೇಣಿ, ಮುಖಂಡರಾದ ತಾತಹಳ್ಳಿ ಕನಕಪ್ರಸಾದ್ , ಗ್ಯಾಸ್ ನಾರಾಯಣಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.