ಶಿಡ್ಲಘಟ್ಟ: ರಾಷ್ಟ್ರೀಯ ನಾಡಹಬ್ಬಗಳ ಆಚರಣಾ ಸಮಿತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ನಗರದ ನೆಹರೂ ಕ್ರೀಡಾಂಗಣದಲ್ಲಿ ತಹಶೀಲ್ದಾರ್ ಬಿ.ಎನ್ ಸ್ವಾಮಿ ಅವರು ಶಾಸಕ ಬಿ ಎನ್ ರವಿಕುಮಾರ್ ರವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ವಿದ್ಯಾರ್ಥಿಗಳಿಂದ ರಾಷ್ಟ್ರ ಗೀತೆ, ವಂದೇ ಮಾತರಂ ಹಾಡುವ ಮೂಲಕ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
ಮುಂದುವರೆದು ತಹಶೀಲ್ದಾರ್ ಬಿ.ಎನ್ ಸ್ವಾಮಿ , ಶಾಸಕ ಬಿಎನ್ ರವಿಕುಮಾರ್ , ಸರ್ಕಲ್ ಇನ್ಸ್ ಪೆಕ್ಟರ್ ಎಂ ಶ್ರೀನಿವಾಸ್ ತೆರೆದ ವಾಹನದಲ್ಲಿ ಪಥಸಂಚಲನ ನಡೆಸಿ ಗೌರವ ಸಲ್ಲಿಸಿದರು. ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್.ಸಿ.ಸಿ ತಂಡ, ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಸಿ ರಾಷ್ಟ್ರ ಧ್ವಜಕ್ಕೆ ಗೌರವ ಸಮರ್ಪಣೆ ಮಾಡಲಾಯಿತು. ಆನಂತರ ವೇದಿಕೆ ಕಾರ್ಯಕ್ರಮ ಆರಂಭವಾಯಿತು.
ಕ್ಷೇತ್ರದ ಶಾಸಕ ಬಿ ಎನ್ ರವಿಕುಮಾರ್ ಮಾತನಾಡಿ ಜಗತ್ತಿನಲ್ಲಿ ಅತಿ ಹೆಚ್ಚು ಜನ ಸಂಖ್ಯೆ ಹೊಂದಿರುವ ದೇಶ ನಮ್ಮ ಭಾರತ. ಈ ದೇಶದ ಜನ ಸ್ವಾತಂತ್ರ್ಯದಿಂದ ಜೀವನ ನಡೆಸಬೇಕಾದರೆ ಅನೇಕ ಮಹನೀಯರ ತ್ಯಾಗ ಬಲಿದಾನದಿಂದ ಎಲ್ಲರೂ ನೆಮ್ಮದಿಯಾಗಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ. ಗೌರಿಬಿದನೂರು ತಾಲ್ಲೂಕಿನ ವಿದುರಾಶ್ವತ್ಥ ಸಣ್ಣ ಗ್ರಾಮದಿಂದ ಸ್ವಾತಂತ್ರದ ಹೋರಾಟ ಆರಂಭವಾಗಿತ್ತು. ಸುಮಾರು 32 ಹೆಚ್ಚು ಮಂದಿ ಸ್ವಾತಂತ್ರ್ಯ ಹೋರಾಟಗಾರರನ್ನ ಹತ್ಯಾ ಮಾಡಲಾಗಿತ್ತು. ಅಂತಹ ಮಹನೀಯರ ಹೋರಾಟ, ತ್ಯಾಗದಿಂದ ಬ್ರಿಟಿಷರಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅಹಿಂಸೆ, ಸತ್ಯಾಗ್ರಹ ಅಸ್ತ್ರಗಳೊಂದಿಗೆ ಬ್ರಿಟಿಷರ ವಿರುದ್ದ ಹೋರಾಟ ನಡೆಸಿದರು. ದೇಶಕ್ಕೆ ಸಂವಿಧಾನ ಬರೆದುಕೊಟ್ಟ ಬಾಬಾ ಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರನ್ನ ನಾವೆಲ್ಲರೂ ಸ್ಮರಿಸಬೇಕು. ನಾವೆಲ್ಲರೂ ಸಮಾಜಕ್ಕೆ ಕೈಲಾಗುವಷ್ಟು ಒಳ್ಳೆಯ ಕೆಲಸಗಳು ಮಾಡಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಮುನ್ನಡೆಯೋಣ, ವಿದ್ಯಾಭ್ಯಾಸ, ನಡೆ ನುಡಿಯಿಂದ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ತಾಯಿಯೇ ಮೊದಲ ದೇವರು, ತಂದೆ-ತಾಯಿ, ಗುರುವಿಗೆ ಗೌರವಿಸುವ ಮಕ್ಕಳು ಭವಿಷ್ಯದ ಸಮಾಜದಲ್ಲಿ ಉತ್ತಮ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಎಂದರು.
2022-23 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿರುವ ಮೂವರು ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯಿಂದ ನೀಡಿದ್ದ ಲ್ಯಾಪ್ ಟಾಪ್ ಗಳು ವಿತರಿಸಲಾಯಿತು.
ನೆಹರೂ ಕ್ರೀಡಾಂಗದಲ್ಲಿ ತಾಲ್ಲೂಕಿನ ವಿವಿಧ ಪ್ರತಿಷ್ಟಿತ ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆಗಳಿಗೆ, ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ವಿಶೇಷ, ವಿಭಿನ್ನವಾಗಿ ನೃತ್ಯ ಪ್ರದರ್ಶನ ನೀಡಿ ಎಲ್ಲರ ಮನರಂಜಿಸುವ ಮೂಲಕ ಉತ್ಸಾಹ ಮೂಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎನ್ ಸ್ವಾಮಿ, ತಾಲ್ಲೂಕು ಪಂಚಾಯಿತಿ ಹೇಮಾವತಿ, ಸರ್ಕಲ್ ಇನ್ಸ್ ಪೆಕ್ಟರ್ ಎಂ.ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ, ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಸತೀಶ್ ಕೆ. ನಗರ ಠಾಣೆ ಪಿ.ಎಸ್. ಐ. ವೇಣುಗೋಪಾಲ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತ ಸಂಘದ ಮುಖಂಡರಾದ ಭಕ್ತರಹಳ್ಳಿ ಬೈರೇಗೌಡ, ಪ್ರತೀಶ್, ರವಿಪ್ರಕಾಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪಟೇಲ್ ನಾರಾಯಣಸ್ವಾಮಿ, ಸೇರಿದಂತೆ ಪುಟಾಣಿ ಮಕ್ಕಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.