‘ಸಂವಿಧಾನ ಶಕ್ತಿ ನ್ಯೂಸ್’ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ನಾಯನಹಳ್ಳಿ ಗ್ರಾಮದ ನಿವಾಸಿ 28 ವರ್ಷದ ಕಮಲ ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳನ್ನು (ಮಗಳಾದ ಅನುಷ 9 ವರ್ಷ) ಮತ್ತು (ಮಗನಾದ ಜಾನ್ ಅಬ್ರಾಹಮ್ 6 ವರ್ಷ) ಕರೆದುಕೊಂಡು ಡಿಸೆಂಬರ್ 16 ರಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆಂದು ಶಾಂತಕುಮಾರ್ ರವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ನನ್ನ ಹೆಂಡತಿ ಮತ್ತು ಮಕ್ಕಳನ್ನು ಪತ್ತೆ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.
ಚಹರೆ: ಕಮಲ, 28 ವರ್ಷ ವಯಸ್ಸು, 5 ಅಡಿ ಎತ್ತರ, ಗುಂಡು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕೆಂಪು ಬಣ್ಣದ ನೈಟಿ ಧರಿಸಿದ್ದು, ಕನ್ನಡ ಮತ್ತು ತೆಲುಗು ಮಾತನಾಡುತ್ತಾರೆ.
ಮಗಳ ಚಹರೆ: ಅನುಷ, 9 ವರ್ಷ ವಯಸ್ಸು, 3 ಅಡಿ ಎತ್ತರವಿದ್ದು, ಗುಂಡು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು, ನೀಲಿ ಬಣ್ಣದ ಫ್ರಾಕ್ ಧರಿಸಿದ್ದು, ಕನ್ನಡ, ತೆಲುಗು ಮಾತನಾಡುತ್ತಾಳೆ.
ಮಗನ ಚಹರೆ: ಜಾನ್ ಅಬ್ರಾಹಮ್, 6 ವರ್ಷ ವಯಸ್ಸು, 2 ಅಡಿ ಎತ್ತರ, ಗುಂಡು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕೆಂಪು ಬಣ್ಣದ ಟಿ ಶರ್ಟ್ ಮತ್ತು ಬಿಳಿ ಬಣ್ಣದ ನಿಕ್ಕರ್ ಧರಿಸಿದ್ದು, ಕನ್ನಡ, ತೆಲುಗು ಮಾತನಾಡುತ್ತಾನೆ.
ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಹಾಗೂ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೇಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.