ಶಿಡ್ಲಘಟ್ಟ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ನೂತನ ಅಧ್ಯಕ್ಷರನ್ನಾಗಿ ಬಿ. ಆಂಜಿನಪ್ಪ ಅವರನ್ನು ನೇಮಕ ಮಾಡಿ ತಾಲ್ಲೂಕು ಅಧ್ಯಕ್ಷರಾದ ಎನ್. ಮುನೇಗೌಡ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು.
ಸಂಘದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ರಾಜಕೀಯ ಆಸೆ ಆಮೀಷಗಳಿಗೆ ಒಳಗಾಗದೆ ಸಾಮಾಜಿಕ ಪಿಡುಗಗಳಿಂದ ದೂರವಿರಬೇಕು ಪ್ರಾಮಾಣಿಕತೆ ಮತ್ತು ಘನತೆಯ ಚಾರಿತ್ರಕ್ಕೆ ದಕ್ಕೆ ಬಾರದ ರೀತಿಯಲ್ಲಿ ಸಾಮಾಜಿಕ ಜವಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಯಾವುದೇ ಜಾತಿ, ಧರ್ಮ, ಮೇಲು ಕೀಳು ಯಾವುದೇ ಕಲಹ ಬಾರದ ರೀತಿಯಲ್ಲಿ ಕೆಲಸ ಮಾಡಬೇಕು ಜೊತೆಗೆ ಹೋಬಳಿಯಲ್ಲಿ ರೈತ ಸಂಘವನ್ನು ಸಂಘಟನೆ ಮಾಡಿ ರೈತರ ಸಮಸ್ಯೆಗಳಿಗೆ ಸ್ಪಂಧಿಸಿ ಧ್ವನಿಯಾಗಬೇಕು ಎಂದು ನೇಮಕಾತಿ ಪತ್ರದ ಮೂಲಕ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಎನ್ ಮುನೇಗೌಡ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ರೈತ ಮುಖಂಡರಾದ ಚಿಂತಾಮಣಿ ಕದಿರಪ್ಪ, ದೊಡ್ಡತೇಕಹಳ್ಳಿ ಕದಿರಪ್ಪ, ಇತರರು ಉಪಸ್ಥಿತರಿದ್ದರು.