ಚಂಡೀಗಢ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನ ಕಾಂಗ್ರೇಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆಂಬ ವಿಶ್ವಾಸವಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬ ಬಿಜೆಪಿಯ ವಾದ ಅಸಂಬದ್ಧವಾಗಿದೆ ಎಂದು ವ್ಯಂಗ್ಯವಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ 200 ಸೀಟು ದಾಟಲ್ಲ ಎಂದಿದ್ದಾರೆ.
ಅಂತಿಮ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ ಸಮೀಪಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಆಮೃತಸರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ತಮಿಳುನಾಡು, ಕೇರಳ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿ ಅಸ್ತಿತ್ವದಲ್ಲೇ ಇಲ್ಲ. ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಬಿಜೆಪಿ ದುರ್ಬಲವಾಗಿವೆ. ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಕೊಂಚ ಸ್ಪರ್ಧೆ ಇದೆ. ಹೀಗಾಗಿ ಬಿಜೆಪಿ 400 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಗೆ ಹೋಲಿಕೆ ಮಾಡಿದರೆ, ಬಿಜೆಪಿಯ ಸೀಟುಗಳಿಕೆಯಲ್ಲಿ ತುಂಬಾ ಕಡಿಮೆಯಾಗಲಿದೆ. ಇದು ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಲಾಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಡಿಸಿದರು.
ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಅಧಿಜ ಸ್ಥಾನ ಕಳೆದುಕೊಳ್ಳುವುದಾಗಿ ಹೇಳಿರುವ ಅಮಿತ್ ಶಾ ಗೆ ತಿರುಗೇಟು ನೀಡಿರುವ ಖರ್ಗೆ, ತಾವು ರಾಜಕೀಯಕ್ಕೆ ಬಂದಿದ್ದು ಕೆಲಸ ಮಾಡಲು ಅಲ್ಲ, ಚಿಕ್ಕವನಿದ್ದಾಗಲೂ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಶಾ ಅವರ ಕೆಲಸದ ಬಗ್ಗೆ ಚಿಂತಿಸುವುದು ಸೂಕ್ತ ಎಂದರು.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಡವರು, ದುರ್ಬಲ ವರ್ಗದವರ ಪರವಾಗಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖಾಲಿ ಇರುವ 30 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ ಮಾಡಲಾಗುವುದು ಎಂದು ಖರ್ಗೆ ಆಶ್ವಾಸನೆ ನೀಡಿದ್ದಾರೆ.