ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ.
ಸೀಕಲ್ ರಾಮಚಂದ್ರಗೌಡರ ಸೇವಾ ಸೌಧ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.
ಶಿಡ್ಲಘಟ್ಟ : ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಬಂದ ಮೇಲೆ ಗ್ಯಾರೆಂಟಿ ಗಳು ಸರಿಯಾಗಿ ತಲುಪುತ್ತಿಲ್ಲ. ನರೇಂದ್ರ ಮೋದಿ ಅವರ ಹತ್ತು ವರ್ಷಗಳ ಆಡಳಿತದಲ್ಲಿ ಅವರು ಕೊಟ್ಟಂತಹ ಯೋಜನೆಗಳು ಪ್ರತಿಯೊಬ್ಬರಿಗೂ ಸಿಗುತ್ತಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಇಲ್ಲ ಅಂದ್ರೆ ದೇಶ ಇಲ್ಲ ಎಂಬುದು ಜನರಿಗೆ ಗೊತ್ತಾಗಿದೆ. ಬಿಜೆಪಿ ಸದಸ್ಯತ್ವಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ಬಿಜೆಪಿ ಮುಖಂಡರು ಹಾಗೂ ಖ್ಯಾತ ಉದ್ಯಮಿ ಸೀಕಲ್ ರಾಮಚಂದ್ರಗೌಡ ಹೇಳಿದರು.
ನಗರದ ಮಯೂರ ವೃತ್ತದ ಬಳಿಯಿರುವ ಬಿಜೆಪಿಯ ಸೇವಾ ಸೌಧ ಕಛೇರಿಯಲ್ಲಿ ಸೀಕಲ್ ರಾಮಚಂದ್ರಗೌಡರು 69 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕನ್ನಡ ನಾಡಿನ ಜನತೆಗೆ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಶುಭಾಶಯಗಳು ಕೋರಿದರು.
ದೇಶದಲ್ಲಿ ಈಗಾಗಲೇ 12 ಕೋಟಿ ಮೀರಿ ಬಿಜೆಪಿ ಸದಸ್ಯತ್ವ ಆಗಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದು 45 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ಮಾಡಿಸಿದ್ದು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಾವೇ ಮೊದಲ ಸ್ಥಾನದಲ್ಲಿದ್ದೇವೆ.
30 ನೇ ತಾರೀಖು ಗಡುಗು ಕೊಡಲಾಗಿತ್ತು. ರಾಜ್ಯ ನಾಯಕರೊಂದಿಗೆ ಚರ್ಚಿಸಿ ಹತ್ತು ದಿನಗಳ ಕಾಲ ಸದಸ್ಯತ್ವ ನೋಂದಣಿ ಮಾಡಿಸಲು ಕಲಾವಕಾಶ ತೆಗೆದುಕೊಂಡಿದ್ದೇವೆ. ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು ಸದಸ್ಯತ್ವ ಮಾಡಿಸುತ್ತಿದ್ದು, ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಮಹಿಳೆಯರು, ಅಣ್ಣ – ತಮ್ಮಂದಿರು ಎಲ್ಲರೂ ಸದಸ್ಯತ್ವವನ್ನು ಉತ್ಸಾಹದಿಂದ ಮಾಡಿಸುತ್ತಿದ್ದಾರೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲೂ ಹಿರಿಯರಿಂದಲೂ ಉತ್ತಮ ಸ್ಪಂದನೆ ಸಿಗುತ್ತಿದೆ ಇದರಿಂದ ನಮಗೆ ಮತ್ತಷ್ಟು ಉಮ್ಮಸ್ಸು ಬಂದಿದೆ. ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆಯುತ್ತದೆ ಎಂದರು.
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳು ಪ್ರಯುಕ್ತ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಮುಖಂಡರು, ಕಾರ್ಯಕರ್ತರಿಗೆ ಸಹಿಯನ್ನು ಹಂಚಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸೀಕಲ್ ಆನಂದ್ ಗೌಡ, ಕಂಬಂದಹಳ್ಳಿ ಸುರೇಂದ್ರಗೌಡ, ಸಂಜೀವಪ್ಪ, ಕನಕಪ್ರಸಾದ್, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.