Tuesday, December 24, 2024
Homeರಾಜ್ಯಬರ ಪರಿಹಾರದ ಹಣ ರೈತರ ಸಾಲಕ್ಕೆ ವಜಾ ಮಾಡಬೇಡಿ ಬ್ಯಾಂಕರ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್...

ಬರ ಪರಿಹಾರದ ಹಣ ರೈತರ ಸಾಲಕ್ಕೆ ವಜಾ ಮಾಡಬೇಡಿ ಬ್ಯಾಂಕರ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ.

ಬರ, ಮುಂಗಾರು ಕೃಷಿ ಕುರಿತು ಡೀಸಿ, ಜಿ.ಪಂ. ಸಿಇಒಗಳ ಜೊತೆ ವಿಡಿಯೊ ಸಂವಾದ.

ಬೆಂಗಳೂರು: ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳಬಾರದು ಎಂದು ಬ್ಯಾಂಕರ್‌ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಬರ ಮತ್ತು ಮುಂಗಾರು ಕೃಷಿ ಚಟವಟಿಕೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಈ ವರ್ಷದ ಸಾಲದ ಕಳುಹಿಸಲಾಗಿದೆ. ಜಿಲ್ಲಾದ ಬ್ಯಾಂಕಿ‌ತಗಳು ಸಮನ್ವಯ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜೂನ್ 06 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಎಲ್ಲಾ ಜಿಲ್ಲಾ ಅಧಿಕಾರಿಗಳು ಸಮನ್ವಯದಿಂದ ಮಾಡಬೇಕು. ಫೆಬ್ರವರಿಯಲ್ಲಿ ಬಜೆಟ್ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗಿವೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್ ಕೊನೆಯ ಒಳಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾ ಆದೇಶ ಹೊರಡಿಸಬೇಕು. ಟೆಂಡರ್ ಕರೆಯಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಆದ್ದರಿಂದ ಟೆಂಡ‌ರ್ ಕರೆದು, ಅಂತಿಮಗೊಳಿಸಿ ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ, ಅಭಿವೃದ್ಧಿಯೂ ಎಳಂಬವಾಗುತ್ತದೆ ಎಂದು ಹೇಳಿದರು. 500 ಕ್ಕೂ ಹೆಚ್ಚು ಘೋಷಣೆಗಳನ್ನು ಹೊರಡಿಸಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಗಮನಹರಿಸಬೇಕಾಗಿದೆ. ಅಭಿವೃದ್ಧಿಗೆ ವೇಗ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಬೆಳೆ ವಿಮೆ ಕ್ರೇಮ್ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಶಿವಾನಂದ ಪಾಟೀಲ, ಎಸ್.ಎಸ್, ಮಲ್ಲಿಕಾರ್ಜುನ್, ಸಂತೋಷ್ ಲಾಡ್, ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ ಎಲ್ ಕೆ ಅತೀಕ್ , ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂದು ಪತ್ತೆ ಮಾಡದಿರುವುದು ಅಪರಾಧ: ಮೈಸೂರು ಜಿಲ್ಲೆಯ ತಗಡೂರು ಮತ್ತು ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ತಲೆದೋರಿದೆ. ಸಾಲುಹುಂಡಿಯಲ್ಲಿ 40 ಜನ ಅಸ್ವಸ್ಥರಾಗಿದ್ದು ಒಬ್ಬ ಮೃತಪಟ್ಟಿದ್ದಾನೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಿಎಂ ಕಿಡಿಕಾರಿದ್ದಾರೆ. ಕಲುಷಿತ ನೀರು ಕುಡಿದ ಪರಿಣಾಮ ಕಾಲರಾ ಬಂದಿದೆ. ಕುಡಿಯುವ ಯೋಗ್ಯ ನೀರು ಪೂರೈಕೆ ಮಾಡುವಲ್ಲಿ ಎಂಚನಿಯರುಗಳು ವಿಫಲರಾಗಿದ್ದಾರೆ. ನೀರಿನ ಮೂಲ ಯೋಗ್ಯವಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸದೇ ಇರುವುದ ಅಪರಾಧ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಈ ರೀತಿಯ ಘಟನೆ ಸಂಭವಿಸಿದೆ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ತ್ರ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!