Monday, December 23, 2024
Homeರಾಜಕೀಯಲೋಕಸಭಾ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲ್ಲೂಕು, ಪಂಚಾಯತಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧ: ಸಿಎಂ...

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲ್ಲೂಕು, ಪಂಚಾಯತಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧ: ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಹಾಗೂ ಬಿಬಿಎಂಪಿ ಚುನಾವಣೆ ಚುನಾವಣೆ ನಡೆಸಲು ಸಿದ್ಧವಿರುವುದಾ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಬಿಬಿಎಂಪಿ, ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಈ ಚುನಾವಣೆಗಳನ್ನು ನಿಗದಿ ಮಾಡಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಅಡ್ವಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದು ಹೇಳಿದರು.

ಹೈ ಕಮಾಂಡ್ ಯತೀಂದ್ರ ಅವರನ್ನು ಎಂ.ಎಲ್ ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧಿಸಲು ತೀರ್ಮಾನವಾದಾಗ ಕ್ಷೇತ್ರ ಬಿಟ್ಟು ಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು.

ಅತ್ಯಾಚಾರ ಸಂಗತಿ ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ವಿರುದ್ಧ ಹೆಚ್‌ಡಿಕೆ ಆರೋಪ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆ ಗೊಳಪಡಿಸುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅಣ್ಣನ ಮಗ ಪ್ರಜ್ವಲ್‌ನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಯಾಗಿದ್ದಾರೆ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲಿ ಆರೋಪಿ ಅಷ್ಟೇ ಎಂದಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು, ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ ಎಂದರು. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಂತ ನಂಬಿರುವುದೇ ನಿಮ್ಮ ತಪ್ಪು ಎಂದು ಮರು ಪ್ರಶ್ನೆ ಹಾಕಿದರು.

ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ, ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ. ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದು ಹೇಳಿದರು.

ಚುನಾವಣಾ ಫಲಿತಾಂಶಕ್ಕಾಗಿ ಇದನ್ನು ವಿಳಂಬ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಪ್ರಶ್ನೆಯನ್ನು ಬಿಜೆಪಿಯ ಪ್ರಹ್ಲಾದ್ ಜೋತಿ ಅವರನ್ನು ಕೇಳಿ ಎಂದು ತಿರುಗೇಟು ನೀಡಿದರು.

ದೇವೇಗೌಡರ ಗಮನಕ್ಕೆ ಬಾರದೆ ಪ್ರಜ್ವಲ್ ರೇವಣ್ಣ • ವಿದೇಶಕ್ಕೆ ಹೋಗಿದ್ದಾರೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ ಅವರು. ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆಗೆ ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಸಂಪರ್ಕವೂ, ಅಲ್ಲವೋ ಎಂದು ಹೇಳಿದರು.

ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ, ಎಸ್ ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದು ತಿಳಿಸಿದರು.

ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!