Monday, December 23, 2024
Homeಜಿಲ್ಲೆಇ- ಆಸ್ತಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶ ಸಂಯೋಜನೆ.ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ.

ಇ- ಆಸ್ತಿ ತಂತ್ರಾಂಶದೊಂದಿಗೆ ಕಾವೇರಿ ತಂತ್ರಾಂಶ ಸಂಯೋಜನೆ.ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ.

ಚಿಕ್ಕಬಳ್ಳಾಪುರ: ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿರುತ್ತದೆ. ಹಾಗೂ ಜಮೀನಿನ ಸರ್ವೆ ನಕ್ಷೆ (ಸ್ಕೆಚ್)-ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ದಿನಾಂಕ:05/10/2016 ರಿಂದ ಸಂಯೋಜನೆ ಮಾಡಲಾಗಿದೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ದಿನಾಂಕ:18/07/2014 ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

ಈ ಮೇಲೆ ಕಾಣಿಸಿದ ಆಸ್ತಿಗಳನ್ನು ಹೊರತು ಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ (ತಂತ್ರಾಂಶ) ವನ್ನು ರೂಪಿಸಿದ್ದು ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ:29/01/2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.
ನಗರಾಭಿವೃದ್ಧಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುತ್ತಾರೆ. ಮುಂದುವರೆದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿನಾಂಕ : 23-09-2024 ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ: ಕಂಇ/20/ಎಂಎನ್ಎಂಯು/2023‌, ದಿನಾಂಕ:17-09-2024 ರ ಆದೇಶದ ಮೂಲಕ ಆದೇಶಿಸಲಾಗಿದೆ. ಆದಕಾರಣ ದಿನಾಂಕ: 23-09-2024 ರಿಂದ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೊಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರಿಗೆ ಈ ಕೆಳಕಂಡ ಉಪಯೋಗಗಳಾಗುತ್ತದೆ.

* ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು.

* ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ.

* ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು.
ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು.

* ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!