ಶಿಡ್ಲಘಟ್ಟ: ಜುಲೈ 20 ರ ಮೂರನೇ ಶನಿವಾರ ಇಂದು ಮದ್ಯಾಹ್ನ 3: 00 ಗಂಟೆಯಿಂದ ಸಂಜೆ 5:00 ವರೆಗೆ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಳ್ಳಾಗಿದೆ ಎಂದು ನಗರ ಮತ್ತು ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ಪ್ರಭು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ಬೆವಿಕಂ ಕಛೇರಿಯಲ್ಲಿ ಸಭೆ ಹಮ್ಮಿಕೊಂಡಿದ್ದು, ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿದ್ಯುತ್ ಸುರಕ್ಷತಾ ಸಭೆಯನ್ನು ಆಯೋಜಿಸಲಾಗಿದೆ.
ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ತಾಲ್ಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು, ನಗರ ಸಭೆಯ ಅಧ್ಯಕ್ಷರು ಹಾಗೂ ಸದಸ್ಯರು, ಕನ್ನಡ ಪರ ,ದಲಿತ ಪರ ,ಹಾಗೂ ರೈತ ಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಶಿಡ್ಲಘಟ್ಟ ತಾಲ್ಲೂಕಿನ ಎಲ್ಲಾ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಕೊಳ್ಳಬೇಕೆಂದು ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ತಿಳಿಯಲು ಪ್ರಕಟಣೆಯ ಮೂಲಕ ಕೋರಿದ್ದಾರೆ.