Monday, December 23, 2024
Homeರಾಜ್ಯಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ : ಡಿಸಿಎಂ ಡಿ.ಕೆ ಶಿವಕುಮಾರ್

ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾ‌ರ್ ತಿಳಿಸಿದರು.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬುಧವಾರ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ.

ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಮುಂಜಾ ಅಧಿಕಾರಿಗಳಿಗೆ ಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದರು. ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು, ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ ಎಂದರು. ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್ ಜೊತೆ ಚರ್ಚೆ ನಡೆಸಲಾಗಿದ್ದು, ಎಲ್ಲೆಲ್ಲಿ ಬಾಕಿ ಇದೆ ತೆರವುಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆಂದು ತಿಳಿಸಿದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!