ಶಿಡ್ಲಘಟ್ಟ: ಲೋಕಸಭಾ ಚುನಾವಣೆ ಮೊದಲ ಹಂತ ಏಪ್ರಿಲ್ 26 ರಂದು ನಡೆಯಲಿದ್ದು, ಚುನಾವಣಾ ಆಯೋಗದ ನಿರ್ದೇಶದನದಂತೆ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಸಕಲ ಸಿದ್ದತೆಗಳು ಮಾಡಿಕೊಂಡಿದ್ದು, ಮತಗಟ್ಟೆ ಕೆಂದ್ರ ಹಾಗೂ ಚೆಕ್ ಪೋಸ್ಟ್ ಗಳಿಗೆ ಮಂಗಳವಾರದಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.
ದೇಶದ ಅಭಿವೃದ್ದಿಗೆ ನ್ಯಾಯ ಸಮ್ಮತ ಚುನಾವಣೆ ನಡೆಯಬೇಕು ಆ ನಿಟ್ಟಿನಲ್ಲಿ ಚುನಾವಣಾ ಆಯೋಗ ಕಾಲಕಾಲಕ್ಕೆ ಸೂಕ್ತ ಮಾರ್ಗಸೂಚಿ ನಿರ್ದೇಶನಗಳು ನೀಡುತ್ತಿದೆ. ಮತಗಟ್ಟೆ ಕೇಂದ್ರಗಳಲ್ಲಿ ಮತದಾರರು ಬಂದು ಮತಚಲಾಯಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅತಿ ಹೆಚ್ಚು ಮತದಾನವಾಗಬೇಕು ಯಾರೊಬ್ಬರೂ ಮತದಾನದಿಂದ ವಂಚಿತರಾಗಬಾರದು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಚುನಾವಣೆ ಕಾರ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸ, ಲೋಪಗಳಲ್ಲಿದೆ ಮತದಾನ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರ್ ವನಿಯಕಲ್, ತಾಲ್ಲೂಕು ಚುನಾವಣಾಧಿಕಾರಿ ಜಾವೀದ ನಸೀಮಾ ಖಾನಂ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜಿ. ಮುನಿರಾಜ, ತಹಶೀಲ್ದಾರ್ ಬಿ.ಎನ್. ಸ್ವಾಮಿ, ಪೌರಾಯುಕ್ತ ರಘುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಎನ್ ಸುಬ್ಬಾರೆಡ್ಡಿ, ಸರ್ಕಾರಿ ಪ್ರಾಥಮಿಕ ಶಾಲೆ ಸಂಘದ ಶಿಕ್ಷಕರಾದ ನಾರಾಯಣಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.