Tuesday, December 24, 2024
Homeಜಿಲ್ಲೆಸಂವಿಧಾನ ದಿನದಂದು ಪೀಠಿಕೆ ಭೋದಿಸಿದ ಜಿಲ್ಲಾಧಿಕಾರಿ :  ಡಾ. ಪಿ.ಎನ್‌ ರವೀಂದ್ರ

ಸಂವಿಧಾನ ದಿನದಂದು ಪೀಠಿಕೆ ಭೋದಿಸಿದ ಜಿಲ್ಲಾಧಿಕಾರಿ :  ಡಾ. ಪಿ.ಎನ್‌ ರವೀಂದ್ರ

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್‌  ಪುತ್ಥಳಿಗೆ ಮಾಲಾರ್ಪಣೆ.  

ಚಿಕ್ಕಬಳ್ಳಾಪುರ : ದೇಶದ ಪ್ರಜೆಗಳಾದ ನಾವೆಲ್ಲರೂ ಸ್ವಾತಂತ್ರ್ಯ, ಸಮಾನತೆಯಿಂದ ಜೀವನ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಟ್ಟು,  ಭಾರತ ದೇಶಕ್ಕೆ ಸಂವಿಧಾನವನ್ನು ಡಾ. ಬಿ.ಆರ್‌ ಅಂಬೇಡ್ಕರ್‌ ಅವರು ರಚಿಸಿ ಕೊಟ್ದಿದ್ದಾರೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇಂದು ಭಾರತ ದೇಶಕ್ಕೆ ಮಹತ್ವದ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಪಿ.ಎನ್‌ ರವೀಂದ್ರ ಅವರು ಅಭಿಪ್ರಾಯಪಟ್ಟರು.

ಸಂವಿಧಾನದ ದಿನದ ಪ್ರಯುಕ್ತವಾಗಿ ಮಂಗಳವಾರ ಜಿಲ್ಲಾಡಳಿತ ವತಿಯಿಂದ  ಚಿಕ್ಕಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಪದವಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ ಪಿ.ಎನ್‌ ರವೀಂದ್ರ ಅವರು  ಮಾಲಾರ್ಪಣೆ ಮಾಡಿ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಾಹಕಾಧಿಕಾರಿ  ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ನಗರಸಭೆ ಅಧ್ಯಕ್ಷ  ಎ.ಗಜೇಂದ್ರ, ಉಪಾಧ್ಯಕ್ಷ ನಾಗರಾಜ್, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್,  ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಷಾದ್ರಿ, ಮುಖಂಡರಾದ ಗಂಗ್ರೇಕಾಲುವೆ ಮೂರ್ತಿ, ಸುಧಾ ವೆಂಕಟೇಶ್, ಗಾನ ಅಶ್ವತ್, ರತ್ನಮ್ಮ, ಅಂಬೇಡ್ಕರ್ ವಾದಿಗಳು ಹಾಗೂ ಸಮುದಾಯದ ಇತರ ಮುಖಂಡರು, ಸಾರ್ವಜನಿಕರು ಹಾಜರಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!