Monday, December 23, 2024
Homeಜಿಲ್ಲೆಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲು ಕರೆ : ಡಾ.ಎಂ.ಸಿ.ಸುಧಾಕರ್

ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲು ಕರೆ : ಡಾ.ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ನಡೆದ “ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ”ಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ವಹಿಸಿ ಮಾತನಾಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸಾರ್ವಜನಿಕರು ಆಗಮಿಸಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 8:30 ರಿಂದ 9:30ರ ಸಮಯದಲ್ಲಿ ಭಾಗಿಯಾಗಿ ಆಚರಣೆ ಮಾಡಬೇಕು. ಈ ಮಹತ್ವದ ದಿನಾಚರಣೆಯನ್ನು ರಾಜ್ಯದಾದ್ಯಂತ ಏಕ ಕಾಲಕ್ಕೆ ಆಚರಣೆ ಮಾಡಲು ನಮ್ಮ ಸರ್ಕಾರ ಯೋಜಿಸಿದೆ . 2500 ಕಿಲೋ ಮೀಟರ್ ನ ಉದ್ದದ ಮಾನವ ಸರಪಳಿಯನ್ನು ಏಕ ಕಾಲಕ್ಕೆ 25 ಲಕ್ಷ ಜನರಿಂದ ನಿರ್ಮಿಸುವ ಗುರಿ ಇದೆ. ಈ ಬೃಹತ್ ಮಾನವ ಸರಪಳಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮೊಡಕು ಹೊಸಹಳ್ಳಿ ಗ್ರಾಮದಿಂದ ಆರಂಭಗೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯ ಭಾಗವಾದ ಹೆಗ್ಗಡಹಳ್ಳಿ ಬಳಿ ಮಾನವ ಸರಪಳಿ ಮುಕ್ತಾಯವಾಗುತ್ತದೆ. ಕೋಲಾರ ಜಿಲ್ಲೆಯ ಗಡಿಯ ಭಾಗವಾದ ಹೆಚ್ ಕ್ರಾಸ್ ಬಳಿ ಚಿಕ್ಕಗೊಂಡಹಳ್ಳಿಯ ವರಗೆ ಜಿಲ್ಲೆಯ 47 ಕಿಲೋ ಮೀಟರ್ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಬೇಕಿದೆ.ಪ್ರತಿ ಒಂದು ಕೀಲೋ ಮೀಟರ್ ಗೆ 800 ಜನಗಳಿಂದ ಮಾನವ ಸರಪಳಿ ನಿರ್ಮಿಸಲು ಸಿದ್ಧತೆ ಕೈಗೊಳ್ಳಲು ಪ್ರಭಾರ ವಹಿಸಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ.ಅಂದು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು , ಮಜ್ಜಿಗೆ, ಪೊಲೀಸ್ ಬಂದೋಬಸ್ತ್, ಅರೋಗ್ಯ ಸೇವೆ,ಅಬುಂಲೆನ್ಸ್ ನಿಲುಗಡೆ, ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಹಾಗೂ ಮೂಲಭೂತ ಸೌರ್ಕಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಜನಪ್ರತಿನಿಧಿಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಸದಸ್ಯರು ಪದಾಧಿಕಾರಿಗಳೆಲ್ಲರ ಸಹಕಾರ ಪಡೆದು ಆಚರಣೆ ಮಾಡಲು ಎಲ್ಲಾ ಇಲಾಖೆಗಳು ಸಮನ್ವಯ, ಸಹಕಾರದೊಂದಿಗೆ ಕಾರ್ಯ ನಿರ್ವಹಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆಗಳನ್ನು ಸಚಿವರು ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಹಾಗೂ ಅಪರ ಪೊಲೀಸ್ ವರಿಷ್ಠಾಧಿಕಾರಿ ಆರ್ ಐ ಕಾಸಿಂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!