ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ ಆರೋಪ.
‘ಸಂವಿಧಾನ ಶಕ್ತಿ ನ್ಯೂಸ್’ ಚಿಕ್ಕ ಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕು ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜುಗಳನೋಂದಣಿಗೆ ಹಾಗೂ, ಇಸಿ, ಹಳೇ ಕ್ರಯ ಪತ್ರ ಗಳು ಪಡೆಯಲು ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದು, ಉಪ ನೋಂದಣಾಧಿಕಾರಿಯನ್ನ ಕೂಡಲೇ ಅಮಾನತುಗೊಳಿಸಿ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಶಿಡ್ಲಘಟ್ಟ ತಾಲ್ಲೂಕು ಶಾಖೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
ಶಿಡ್ಲಘಟ್ಟ ತಾಲ್ಲೂಕು ಉಪನೋಂದ ಣಾಧಿಕಾರಿಗಳ ಕಚೇರಿಯಲ್ಲಿ ಪ್ರಸ್ತುತ ಟಿ.ಕೆ.ಕಮಲಾಕ್ಷಿ ರವರು ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಪ್ರತಿ ದಸ್ತಾವೇಜುಗಳ ನೋಂದಣಿಗೆ ಲಂಚದ ಹಣ ನಿಗಧಿ ಮಾಡಿಕೊಂಡು ಅನಧಿಕೃತ ಇಬ್ಬರುವ್ಯಕ್ತಿಗಳನ್ನು ನೇಮಿಸಿಕೊಂಡು ಲಂಚದ ಹಣ ವಸೂಲಿ ಮಾಡುತ್ತಿದ್ದಾರೆ ಕೂಡಲೇ ಸಬ್ ರಿಜಿಸ್ಟ್ರಾರ್ ಅವರನ್ನ ಅಮಾನತ್ತುಗೊಳಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಅಗ್ರಹಿಸಿದರು.
ಕ್ರಮ ಕೈಗೊಳ್ಳದಿದ್ದರೆ ಹೋರಾಟ : ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ರೂಪಿಸಲಾಗುವುದು ಎಂದು ತಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿ ದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಜಿಲ್ಲಾ ಕಾರ್ಯದ್ಯಕ್ಷ ಎಚ್, ಎನ್. ಕದೀರೇಗೌಡ, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಮುನೇಗೌಡ, ಕಾರ್ಯದರ್ಶಿ ನವೀನಾಚಾರ್ಯ, ಪ್ರಧಾನ ಕಾರ್ಯ ದರ್ಶಿ ಸಂತೋಷ್, ಉಪಾದ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ಇತರರು ಇದ್ದರು.