ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಬೇಟಿ.
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ಅತೀಕ್ ಪಾಷಾ, ಶುಕ್ರವಾರದಂದು ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ನರೇಗಾ ಯೋಜನೆಯಡಿ ಕೈಗೊಂಡಿರುವ ವಾರಹುಣಸೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಾಂಪೌಂಡ್, ಅಡುಗೆ ಕೋಣೆ, ಸಿ ಸಿ ರಸ್ತೆ ಕಾಮಗಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ದೊಡ್ಡದಾಸೇನಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣ ಮತ್ತು ಅನ್ನಪೂರ್ಣೇಶ್ವರಿ ಅಡುಗೆ ಕೋಣೆಯನ್ನು ವೀಕ್ಷಿಸಿ, ನರೇಗಾ ಯೋಜನೆಯ ಕಡತಗಳನ್ನು ಪರಿಶೀಲಿಸಿ ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಆದೇಶಿಸಿದರು. ಶಾಲಾ ಮಕ್ಕಳಿಗೆ ಉತ್ತಮವಾದ, ಆರೋಗ್ಯಕರ ಆಹಾರವನ್ನು ನೀಡುವಂತೆ ಸೂಚಿಸಿದರು.
ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಬಚ್ಚಲು ಗುಂಡಿ, ಕೃಷಿ ಹೊಂಡ, ಕುರಿ, ಕೋಳಿಗಳ ಶೆಡ್ ನಿರ್ಮಾಣ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳುವುದರ ಬಗ್ಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳುವಂತೆ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ DMIS ಮಧು, ಜಿಲ್ಲಾ ಪಂಚಾಯತ್ ADPC ಹರೀಶ್, ತಾಲ್ಲೂಕು ತಾಂತ್ರಿಕ ಅಭಿಯಂತರ ನಾಗೇಂದ್ರ, ಇಂಜಿನಿಯರ್ ಬಾಬು, ತಾಲ್ಲೂಕು ಐಇಸಿ ಸಂಯೋಜಕ ಲೋಕೇಶ ಹಾಗೂ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.