Friday, December 27, 2024
Homeದೇಶಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆ. ಸರ್ಕಾರಿ ರಜೆ ಘೋಷಣೆ, ಇಂದು ಶಾಲಾ...

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆ. ಸರ್ಕಾರಿ ರಜೆ ಘೋಷಣೆ, ಇಂದು ಶಾಲಾ – ಕಾಲೇಜುಗಳಿಗೆ ರಜೆ.

ದೆಹಲಿ : ರಾಷ್ಟ್ರದ ಮಾಜಿ ಪ್ರಧಾನ ಮಂತ್ರಿ ಡಾ ಮನಮೋಹನ್ ಸಿಂಗ್ (92) ಅವರು ವಿಧಿವಶರಾಗಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ( ಗುರುವಾರ) ರಾತ್ರಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಅವರು ಕೊನೆಯುಸಿರು ಎಳೆದಿದ್ದಾರೆ.

ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಇಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ.

ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು. ಈ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಿ ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ (ಎಲಿಷ್ಠ ಆಂಡೋಸ್) ಸರ್ಕಾರದ ಉಪ ಕಾರ್ಯದರ್ಶಿ ಸಿ.ಆ.ಸು.ಇ.(ರಾಜ್ಯ ಶಿಷ್ಟಾಚಾರ) ಆದೇಶ ಹೊರಡಿಸಿದ್ದಾರೆ.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!