ಶಿಡ್ಲಘಟ್ಟದ ಬಿಜೆಪಿ ಕಚೇರಿಯಲ್ಲಿ 76 ನೇ ಗಣ ರಾಜ್ಯೋತ್ಸವ ಆಚರಣೆ.
‘ಸಂವಿಧಾನ ಶಕ್ತಿ ನ್ಯೂಸ್’ ಶಿಡ್ಲಘಟ್ಟ : ನೂರಾರು ಭಾಷೆ, ಸಾವಿರಾರು ಜಾತಿ, ಹತ್ತಾರು ಧರ್ಮಗಳಿರುವ ಈ ದೇಶವು ಅಂಬೇಡ್ಕರ್ ಅವರ ಸಂವಿಧಾನದಿಂದ ಒಗ್ಗೂಡಿದೆ. 140 ಕೋಟಿ ಜನ ಸಂಖ್ಯೆಯಿರುವ ಭಾರತವು ಜಗತ್ತಿನಲ್ಲಿ ಮುಂಚೂಣಿ ರಾಷ್ಟ್ರವಾಗಿ ಬೆಳೆಯುತ್ತಿದೆ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ತಿಳಿಸಿದರು.
ನಗರದ ಮಯೂರ ವೃತ್ತದಲ್ಲಿನ ಬಿಜೆಪಿಯ ಸೇವಾ ಸೌಧ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ 76ನೇ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಇಂದಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟ, ಬ್ರಿಟೀಷರ ವಿರುದ್ದ ಸ್ವಾತಂತ್ರ್ಯ ಹೋರಾಟದಲ್ಲಿ ತನು ದನ ಮನ ಅರ್ಪಿಸಿ ಹುತಾತ್ಮರಾದ ದೇಶ ಪ್ರೇಮಿಗಳ ಬದುಕು, ಆದರ್ಶ, ಅವರ ತ್ಯಾಗದ ದೇಶ ಭಕ್ತಿಯ ಕುರಿತು ಅರಿವು ಮೂಡಿಸಬೇಕು.
ದೇಶದ ಕೋಟ್ಯಂತರ ಕುಟುಂಬಗಳಲ್ಲಿ ಗಣ ರಾಜ್ಯೋತ್ಸವ ದಿನಾಚರಣೆ ಆಚರಿಸುವಂತಾಗಬೇಕು, ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದ ಆಶಯದಂತೆ ನಾವೆಲ್ಲರೂ ಪ್ರಾಮಾಣಿಕವಾಗಿ ನಡೆದುಕೊಳ್ಳುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನೂರಾರು ಭಾಷೆ, ಸಾವಿರಾರು ಜಾತಿ, ಹತ್ತಾರು ಧರ್ಮಗಳ ಜನರಿದ್ದರೂ ಸಂವಿಧಾನದಡಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದೇವೆ. ಬಾಳುತ್ತಿದ್ದೇವೆ. ಅಷ್ಟರ ಮಟ್ಟಿಗೆ ನಮ್ಮ ಸಂವಿಧಾನವು ಜಗತ್ತಿನಲ್ಲೇ ಶ್ರೇಷ್ಠವಾಗಿದೆ. ಅದಕ್ಕೆ ಚ್ಯುತಿ ಬರುವಂತೆ ಎಂದಿಗೂ ನಾವು ನೀವು ನಡೆದುಕೊಳ್ಳಬಾರದು ಎಂದು ಮನವಿ ಮಾಡಿದರು.
ಮಹಾತ್ಮಗಾಂಧಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮಿಸಿ ಪುಷ್ಪ ನಮನ ಸಲ್ಲಿಸಲಾಯಿತು. ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಿಹಿ ಹಂಚಲಾಯಿತು.
ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ನಗರ ಘಟಕದ ಅಧ್ಯಕ್ಷ ನರೇಶ್, ನಗರಸಭೆ ಸದಸ್ಯ ನಾರಾಯಣಸ್ವಾಮಿ, ಬಂಗಾರು ರಾಮಕೃಷ್ಣಪ್ಪ, ಮಧು, ಅಭಿ, ಮೌನೀಶ್, ಸುಬ್ಬು, ಚಾತುರ್ಯ ಸೇರಿದಂತೆ ಇತರರು ಹಾಜರಿದ್ದರು