Monday, December 23, 2024
Homeಜಿಲ್ಲೆಹಿರಿಯ ನಾಗರಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ ಡಾ. ಪಿ.ಎನ್ ರವೀಂದ್ರ.

ಹಿರಿಯ ನಾಗರಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ ಡಾ. ಪಿ.ಎನ್ ರವೀಂದ್ರ.

“ವಿಶ್ವ ಹಿರಿಯ ನಾಗರೀಕರ ದಿನಾಚರಣೆ’ ಕಾರ್ಯಕ್ರಮ.

ಚಿಕ್ಕಬಳ್ಳಾಪುರ : ಹಿರಿಯ ನಾಗರಿಕರು ಮನೆಯಲ್ಲಿದ್ದರೆ ಮಕ್ಕಳಿಗೆ ಅವರ ಅನುಭವದ ವಿಚಾರಗಳನ್ನು, ಸಂಪ್ರದಾಯ, ಸಂಸ್ಕೃತಿಯನ್ನು ತಿಳಿಸಿಕೊಡುತ್ತಾರೆ. ಅಂತಹ ಹಿರಿಯರಿಗೆ ಪ್ರೀತಿ ತೋರಿ ಗೌರವದಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ. ಪಿ.ಎನ್. ರವೀಂದ್ರ ಅವರು ತಿಳಿಸಿದರು.

ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕ್ರೀಡೆ ಮತ್ತು ಯುವಜನರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ”ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಕಾರ್ಯಕ್ರಮಕ್ಕೆ ಆಗಮಿಸಿರುವುದು ನಮ್ಮೆಲ್ಲರಿಗೆ ಸಂತೋಷ ತಂದಿದೆ. ಪ್ರಸ್ತುತ ದಿನ ಮಾನಗಳಲ್ಲಿ ಹೆತ್ತ ತಂದೆ ತಾಯಿಯನ್ನು ಪೋಷಿಸುವುದನ್ನು ಬಿಟ್ಟು ಮನೆಯಿಂದ ಹೊರಹಾಕುವ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಎಷ್ಟೋ ಜನ ಹಿರಿಯರು ಶ್ರೀಮಂತರಾದರೂ ಸಹ ವೃದ್ಧಾಶ್ರಮಕ್ಕೆ ಸೇರುತ್ತಿದ್ದಾರೆ, ಹಿರಿಯರು ಪ್ರೀತಿ ಹಾಗೂ ಗೌರವ ಬಿಟ್ಟರೆ ಮತ್ತೆ ಏನು ಅವರು ಬಯಸುವುದಿಲ್ಲ. ಜಿಲ್ಲಾಡಳಿತ ಹಿರಿಯ ನಾಗರಿಕರಿಗೋಸ್ಕರ ಕೆಲಸ ಮಾಡಲು ಸದಾ ಸಿದ್ಧವಿದೆ. ತೊಂದರೆಗೆ ಸಿಲುಕಿದ ಹಿರಿಯ ನಾಗರಿಕರು ಯಾವುದೇ ಸಮಯದಲ್ಲಿ ಸಹಾಯವಾಣಿಗೆ ಕರೆ ಮಾಡಿದರೆ ತ್ವರಿತ ಸ್ಪಂದನೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1,47,263 ಹಿರಿಯ ನಾಗರಿಕರಿಗರಿದ್ದಾರೆ. ಈ ಪೈಕಿ 56,880 ಜನರು ಗುರುತಿನ ಚೀಟಿ ಪಡೆದಿದ್ದಾರೆ. 23,642 ಜನರಿಗೆ ರಾಷ್ಟ್ರೀಯ ವೃದ್ಯಾಪ್ಯ ವೇತನ ತಲುಪುತ್ತಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 85,985 ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಡಾ. ಕೆ.ವಿ ಕೃಷ್ಣಪ್ಪ ಅವರು ಮಾತನಾಡಿ ಆಧುನಿಕ ಕಾಲದಲ್ಲಿ ಕುಟುಂಬದ ವ್ಯವಸ್ಥೆ, ಸಂಪ್ರದಾಯ, ಪದ್ಧತಿಗಳು ಬದಲಾಗಿವೆ. ಅವಿಭಕ್ತ ಕುಟುಂಬಗಳು ಮಾಯವಾಗಿ ಅಣು ಕುಟುಂಬಗಳಲ್ಲಿ ವಾಸಿಸಲು ಬಯಸುತ್ತಿದ್ದಾರೆ.ವೃದ್ದಾಶ್ರಮಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಹಿರಿಯರಿದ್ದ ಮನೆ ಸಂಸ್ಕಾರಗೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಹಿರಿಯರನ್ನು ಜೊತೆಯಲ್ಲಿ ಇಟ್ಟುಕೊಂಡು ಚೆನ್ನಾಗಿ ನೋಡಿಕೊಳ್ಳಲು ಸಲಹೆ ನೀಡಿದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರಿಗೆ ಸನ್ಮಾನಿಸಲಾಯಿತು, ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ, ನಗದು ಪುರಸ್ಕಾರ, ಪ್ರಮಾಣಪತ್ರ ಹಾಗೂ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಈಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್. ಗಂಗಾಧರಯ್ಯ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಂಸ್ಥಾಪಕ ಕೆ. ಎನ್ ಮೂರ್ತಿ, ಶ್ರೀ ಸಾಯಿ ದ್ವಾರಕಾಮಯಿ ವೃದ್ಯಾಶ್ರಮ ವ್ಯವಸ್ಥಾಪಕ ಮುರುಳಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ನೋಡಲ್ ಅಧಿಕಾರಿ ಆರ್. ಗಣೇಶ್, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿವೃತ್ತ ಅಧಿಕಾರಿ ಎನ್. ಎಂ ಶಾಂತರಸ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ನೂರಾರು ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಹಾಜರಿದ್ದರು.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!