ಶಾಸಕ ಬಿ.ಎನ್ ರವಿಕುಮಾರ್, ತಹಶೀಲ್ದಾರ್ ಬಿ.ಎನ್ ಸ್ವಾಮಿ ಅವರಿಂದ ಚಾಲನೆ.
ಶಿಡ್ಲಘಟ್ಟ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಾಗೂ ಕನ್ನಡ ರಥ ಯಾತ್ರೆಗೆ ವರ್ಷ ತುಂಬುತ್ತಿರುವ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಶಿಡ್ಲಘಟ್ಟದಲ್ಲಿ ತಾಲ್ಲೂಕು ಆಡಳಿತದಿಂದ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು.
ತಾಲ್ಲೂಕಿನ ಲಕ್ಕಹಳ್ಳಿ ಗೇಟ್ ಬಳಿ ಶಾಸಕ ಬಿ.ಎನ್ ರವಿಕುಮಾರ್, ತಹಶೀಲ್ದಾರ್ ಬಿ.ಎನ್ ಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ, ರೈತಪರ, ವಿವಿಧ ಸಂಘಟನೆಗಳು, ಕನ್ನಡ ಜ್ಯೋತಿ ರಥವನ್ನು ಬರಮಾಡಿಕೊಳ್ಳಲಾಯಿತು. ನಗರದ ಮುಖ್ಯ ರಸ್ತೆ ಬಸ್ ನಿಲ್ದಾಣದ ಬಳಿ ಕನ್ನಡ ಜ್ಯೋತಿ ರಥಕ್ಕೆ ಶಾಸಕ ಬಿ.ಎನ್ ರವಿಕುಮಾರ್ ಮತ್ತು ತಹಶೀಲ್ದಾರ್ ಬಿ.ಎನ್ ಸ್ವಾಮಿ ಅವರು ಪೂಜೆ ನೇರವೇರಿಸಿದರು.
ಮಹಿಳೆಯರು ಪೂರ್ಣ ಕುಂಭ ಕಳಸಗಳು ಹೊತ್ತು, ಕಲಾತಂಡಗಳು, ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನೊಂದಿಗೆ ಕನ್ನಡ ಭಾವುಟಗಳು ಹಿಡಿದು ಮಕ್ಕಳು ಮೆವಣಿಗೆಯಲ್ಲಿ ಮೆರಗು ತಂದರು. ಕನ್ನಡ ರಥದ ಮೆರವಣಿಗೆ ಕೋಟೆ ವೃತ್ತದ ಮಾರ್ಗವಾಗಿ ತಾಲ್ಲೂಕು ಕಚೇರಿಯವರೆಗೆ ಮೇರವಣಿಗೆ ಸಾಗೀತು.
ತಹಶೀಲ್ದಾರ್ ಬಿ.ಎನ್ ಸ್ವಾಮಿ ಅವರು ಮಾತನಾಡಿ ಕನ್ನಡವೇ ನಮ್ಮ ಉಸಿರು ಈ ನಾಡಿನಲ್ಲಿ ಹುಟ್ಟಿರುವುದಕ್ಕೆ ನಾವೆಲ್ಲರೂ ಹೆಮ್ಮೆ ಪಡಬೇಕು. ನಮ್ಮ ನಾಡು, ನುಡಿ, ಸಂಸ್ಕೃತಿಗೆ ಹಲವು ಮಹನೀಯರು ಹೋರಾಟ ಮಾಡಿದ್ದಾರೆ. ಕರ್ನಾಟಕ ರಚನೆ ಮಾಡುವುದಕ್ಕೆ ನೂರಾರು ಕಾಲ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ. ನಾವೆಲ್ಲರೂ ಕೂಡ ಕನ್ನಡ ನುಡಿ, ನಾಡಿಗೆ ಗೌರವಯುತವಾಗಿ ಬದುಕಬೇಕು, ಕನ್ನಡ ಮಾತನಾಡಿ, ಕನ್ನಡಕ್ಕೆ ಗೌರವ ತರುವಂತಹ ರೀತಿಯಲ್ಲಿ ಬದುಕಬೇಕು ಎಂದು ಹೇಳಿದರು.
ತಾಲ್ಲೂಕಿಗೆ ಆಗಮಿಸಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥ ವನ್ನು ತಾಲ್ಲೂಕು ಆಡಳಿತ ಸೌಧದ ಬಳಿ ಅಧಿಕಾರಿಗಳು, ಸಿಬ್ಬಂದಿ, ಪುಷ್ಪ ನಮನ ಸಲ್ಲಿಸಿದರು. ಕನ್ನಡ ಜ್ಯೋತಿ ರಥಯಾತ್ರೆ ಕಾರ್ಯಕ್ರಮ ಯಶಸ್ವಿಯಾಯಿತು.
ಈ ಸಂದರ್ಭದಲ್ಲಿ,ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ, ಸರ್ಕಲ್ ಇನ್ಸ್ ಪೆಕ್ಟರ್ ಎಂ. ಶ್ರೀನಿವಾಸ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ನಗರಸಭೆ ಪೌರಾಯುಕ್ತ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ಎನ್ ಸುಬ್ಬಾರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್, ಕನ್ನಪರ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಕನ್ನಡ ಪ್ರೇಮಿಗಳು, ಸ್ಥಳೀಯ ಜನ ಪ್ರತಿನಿಧಿಗಳು, ಕಲಾತಂಡಗಳು, ಶಾಲಾ ಮಕ್ಕಳು, ಸಾರ್ವಜನಿಕರು, ಭಾಗವಹಿದ್ದರು.
ವರದಿ: ಕೋಟಹಳ್ಳಿ ಅನಿಲ್ ಕುಮಾರ್ ಕೆ ಎ