Monday, December 23, 2024
Homeಜಿಲ್ಲೆಚುನಾಯಿತ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಸಾಕ್ಷರ ಸನ್ಮಾನ ತರಬೇತಿ ಕಾರ್ಯಾಗಾರ.

ಚುನಾಯಿತ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಸಾಕ್ಷರ ಸನ್ಮಾನ ತರಬೇತಿ ಕಾರ್ಯಾಗಾರ.

ಗೌರಿಬಿದನೂರು; ಚುನಾಯಿತ ಗ್ರಾಮ ಪಂಚಾಯಿತಿಗಳ ಅನಕ್ಷರಸ್ಥ ಪ್ರತಿನಿಧಿಗಳನ್ನು ಓದು ,ಬರಹ ಮತ್ತು ಲೆಕ್ಕಾಚಾರಗಳಲ್ಲಿ ಕ್ರಿಯಾತ್ಮಕ ಸಾಕ್ಷರಸ್ಥರನ್ನಾಗಿಸುವ ಉದ್ದೇಶದಿಂದ ಸರ್ಕಾರವು ಜಾರಿಗೆ ತಂದಿರುವ ಸಾಕ್ಷರ ಸನ್ಮಾನ ತರಬೇತಿ ಕಾರ್ಯಾಗಾರದ ಸದುಪಯೋಗವನ್ನು ಚುನಾಯಿತ ಪ್ರತಿನಿಧಿಗಳು ಪಡೆದುಕೊಳ್ಳಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ ಕೆ ಹೊನ್ನಯ್ಯ ತಿಳಿಸಿದರು.

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ಚುನಾಯಿತ ಅನಕ್ಷರಸ್ಥ ಪ್ರತಿನಿಧಿಗಳಿಗೆ ಸಾಕ್ಷರತಾ ಕೌಶಲ್ಯಗಳನ್ನು ನೀಡುವ ಸಾಕ್ಷರ ಸನ್ಮಾನ ತರಬೇತಿದಾರರಿಗೆ ನಗರದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿಂದು ಹಮ್ಮಿಕೊಂಡಿದ್ದ ಮೂರು ದಿನಗಳ ಸಾಕ್ಷರ ಸನ್ಮಾನ ತರಬೇತಿ ಕಾರ್ಯಾಗಾರದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೋಧಕರು, ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರು ತರಬೇತಿ ಕಾರ್ಯಾಗಾರದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದರಲ್ಲದೆ ಚುನಾಯಿತ ಪ್ರತಿನಿಧಿಗಳು ಗ್ರಾಮ ಸಭೆ, ವಾರ್ಡ್ ಸಭೆಗಳಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸಿ ತಮ್ಮ ವಾರ್ಡ್ ಗಳ ಅಭಿವೃದ್ಧಿಗೆ ಶ್ರಮಿಸುವಂತೆ ಮಾಡಬೇಕು ಎಂದರು

ಈ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ವ್ಯವಸ್ಥಾಪಕರಾದ ಶ್ರೀನಿವಾಸ್, ಮುಖ್ಯ ತರಭೇತಿದಾರರಾಗಿ ಎನ್ ಚಿಕ್ಕನರಸಿಂಹಪ್ಪ ,ಬಿ ಆರ್ ಪಿ ಹಾಗೂ ಶಿವಪ್ರಸಾದ್ ಸಿ, ತರಬೇತಿ ಸಂಯೋಜಕರು, ತ್ರಭುವನೇಶ್ವರಿ ತರಭೇತಿ ಸಂಯೋಜಕರು ಭಾಗವಹಿಸಿದ್ದರು,

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!