ಚಿಕ್ಕಬಳ್ಳಾಪುರ : ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಶಿಡ್ಲಘಟ್ಟ ತಾಲ್ಲೂಕಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದು ಕೊರತೆಗಳ ಸಭೆಯನ್ನು ಶಿಡ್ಲಘಟ್ಟ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡದೆ ವಿಳಂಬ ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮಗಳನ್ನು ನಡೆಸಿ ಹಣ ದುರುಪಯೋಗಪಡಿಸಿದ್ದಲ್ಲಿ ಆ ಬಗ್ಗೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಈ ಸಭೆಗೆ ಹಾಜರಾಗಿ ದೂರು ಅರ್ಜಿ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ನೀಡಬಹುದೆಂದು ಚಿಕ್ಕಬಳ್ಳಾಪುರ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.