ಶಿಡ್ಲಘಟ್ಟ : ಲೋಕಸಭಾ ಚುನಾವಣೆ ಪ್ರಯುಕ್ತ ಜನರ ಗಮನ ಸೆಳೆದು ಚುನಾವಣೆ ಕುರಿತು ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆಯಿಂದ ನಗರದ ರೈಲ್ವೆ ಅಂಡರ್ ಪಾಸ್ ಬಳಿಯ ರಸ್ತೆಯಲ್ಲಿ ರಂಗೋಲಿ ಬಿಡಿಸುವ ಸ್ಪರ್ದೆಯನ್ನು ಏರ್ಪಡಿಸಲಾಗಿತ್ತು.
ಈ ವೇಳೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮಾತನಾಡಿ ರಾಜ್ಯದಲ್ಲಿ ಏಪ್ರಿಲ್ 26 ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ ವಯಸ್ಕರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಈ ಬಾರಿಯ ಚುನಾವಣೆಯಲ್ಲಿ ಶೇಕಡಾ 100% ರಷ್ಟು ಮತದಾನವಾಗಬೇಕು ಎಂದು ಕರೆ ನೀಡಿದರು.
ತಹಶೀಲ್ದಾರ್ ಬಿ.ಎನ್ ಸ್ವಾಮಿ ಮಾತನಾಡಿ ಲೋಕಸಭೆ ಚುನಾವಣೆ ಪ್ರಯುಕ್ತ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಇದು ತೋರ್ಪಡಿಕೆಗಾಗಿ ಮಾಡಿರುವುದಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಅದರಲ್ಲೂ ನಗರ ಪ್ರದೇಶದ ಕೆಲವೊಂದು ಬೂತ್ ಗಳಲ್ಲಿ ಕಡಿಮೆ ಪ್ರಮಾಣದಲ್ಲಿಮತದಾನವಾಗಿದೆ. ಮತದಾನದ ಪ್ರಾಮುಖ್ಯತೆ ಎಲ್ಲರಿಗೂ ಅರ್ಥವಾಗಬೇಕು. ಹಬ್ಬಗಳ ಸಂದರ್ಭಗಳಲ್ಲಿ ಮನೆಯಮುಂದೆ ರಂಗೋಲಿ ಹಾಕುತ್ತಾರೆ.ಆದರೆ ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಅದನ್ನ ಆಚರಣೆ ಮಾಡಬೇಕು. ಆ ನಿಟ್ಟಿನಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ರಂಗೋಲಿ ಹಾಕುವುದರ ಮೂಲಕ ನಾಗರೀಕರಿಗೆ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಲ್ಲರೂ ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಿ ಎಂದು ತಿಳಿಸಿದರು.
ರಂಗೋಲಿ ಸ್ಪರ್ದೆಯಲ್ಲಿ ಮಹಿಳೆಯರು, ಒಬ್ಬರಿಗಿಂತ ಮತ್ತೊಬ್ಬರು ವಿಭಿನ್ನ ವಿಶೇಷವಾಗಿ ರಂಗೋಲಿ ಬಿಡಿಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಸಿಡಿಪಿಓ ನೌತಾಜ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್, ನಗರಠಾಣೆ ಪಿ.ಎಸ್.ಐ ವೇಣುಗೋಪಾಲ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.
ವರದಿ: ಕೋಟಹಳ್ಳಿ ಅನಿಲ್ ಕುಮಾರ್