ತಾಲ್ಲೂಕು ಆಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.
ಶಿಡ್ಲಘಟ್ಟ: ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಕಲಿಯುಗದ ಇಡೀ ಭೂ ಮಂಡಲಕ್ಕೆ ಉತ್ತಮ ಸಂದೇಶ ಸಾರಿದ್ದಾರೆ ಎಂದು ಶಾಸಕ ಬಿ.ಎನ್ ರವಿಕುಮಾರ್ ಹೇಳಿದರು.
ನಗರದ ಮಯೂರ ವೃತ್ತದ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ವಾಲ್ಮೀಕಿ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ತಂದೆ- ತಾಯಿ ಇಟ್ಟಿದ್ದ ಹೆಸರು ರತ್ನಾಕರ ಮಹಾಕಾವ್ಯ ರಾಮಾಯಣ ಬರೆದು ಮಹರ್ಷಿ ವಾಲ್ಮೀಕಿಯಾದರು. ಎಂದು ತಿಳಿಸಿದರು.
ತಾಲ್ಲೂಕಿನ ತಲಕಾಯಲಬೆಟ್ಟದ ಟಿ ವೆಂಕಟಾಪುರ ಬಳಿಯಿರುವ ವಾಲ್ಮೀಕಿ ದೇವಾಲಯದಲ್ಲೂ ಬೆಳಗ್ಗೆಯಿಂದಲೆ ಪೂಜೆ ನೆರವೇರಿತು.
ರಾಷ್ಟ್ರೀಯ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದಿಂದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪೂಜೆ ಮಾಡುವ ಮೂಲಕ ಸರಳವಾಗಿ ಜಯಂತಿಯನ್ನ ಆಚರಿಸಲಾಯಿತು.
ವಾಲ್ಮೀಕಿ ಜಯಂತಿ ಪ್ರಯುಕ್ತ ವಾಲ್ಮೀಕಿ ದೇವಸ್ಥಾನಗಳು ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ಎನ್ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ , ನಗರ ಸಭೆ ಪೌರಾಯುಕ್ತ ಮಂಜುನಾಥ ನಗರ ಸಭೆ ಅಧ್ಯಕ್ಷ ಎಂ.ವಿ.ವೆಂಕಟಸ್ವಾಮಿ ಮುಖಂಡರಾದ ತಾದೂರು ರಘು , ಸಮುದಾಯದ ಮುಖಂಡರಾದ ಬಂಕ್ ಮುನಿಯಪ್ಪ , ಲಗಿನಾಯಕನಹಳ್ಳಿ ಮುನಿಯಪ್ಪ , ರಾಮಚಂದ್ರಪ್ಪ , ಮುತ್ತೂರು ವೆಂಕಟೇಶ್, ಸೇರಿದಂತೆ ಸಮುದಾಯಗಳ ಮುಖಂಡರು, ಯುವಕರು ಪೂಜೆಯಲ್ಲಿ ಭಾಗವಹಿಸಿದ್ದರು.